ಹಾಸನ: ಇಂದಿನಿಂದ ರಾಜ್ಯಾದ್ಯಂತ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಹಿನ್ನಲೆ ಹಾಸನದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲೂ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ ಐದು ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಹೋಂಸ್ಟೇ, ರೆಸಾರ್ಟ್ ಗಳಲ್ಲಿ ರಾತ್ರಿ 10ರ ನಂತರ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದು ತಿಳಿಸಿದರು. ಇನ್ನು ಸರ್ಕಾರದ ಆದೇಶದಂತೆ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಬೇಕು. ರೆಸಾರ್ಟ್ ಮಾಲೀಕರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು.
ಈಗಾಗಲೇ ನೀಡಿರುವ ಸೂಚನೆಯನ್ನು ಅನುಸರಿಸಬೇಕು. ಇಲ್ಲವಾದಲ್ಲಿ ಅಂತಹ ರೆಸಾರ್ಟ್, ಹೋಂಸ್ಟೇ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅನಗತ್ಯ ಓಡಾಟ ತಪ್ಪಿಸಲು ಬ್ಯಾರೆಕೇಡ್ ಗಳನ್ನು ಹಾಕಲಾಗಿದೆ. ಚೆಕ್ ಫೋಸ್ಟ್ ಗಳಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಕಟ್ಟುನಿಟ್ಟಾಗಿ ಬಂದೋ ಬಸ್ತ್ ಮಾಡಲಾಗುವುದು. ಜನರು ಸಹಕರಿಸಬೇಕು, ಕಾರಣವಿಲ್ಲದೆ ಅನಗತ್ಯವಾಗಿ ಯಾರೂ ಓಡಾಟ ಮಾಡಬಾರದು. ಎಮರ್ಜೆನ್ಸಿ ಇದ್ದರೆ 112 ಗೆ ಕರೆ ಮಾಡಿದರೆ, ಪೊಲೀಸರು ಸಹಾಯ ಮಾಡುತ್ತಾರೆ ಎಂದು ತಿಳಿಸಿದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy