ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ವಿಧಿಸಿದ್ದ ನೈಟ್ ಕರ್ಫ್ಯೂ ಹಿಂಪಡೆದು ಸರ್ಕಾರ ಇಂದು (ನವೆಂಬರ್ 5) ಆದೇಶ ಹೊರಡಿಸಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೆ ವಿದಿಸಿದ್ದ ಆದೇಶ ವಾಪಸ್ ಪಡೆಯಲಾಗಿದೆ.
ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹಾಗೂ ದೇಶಾದ್ಯಂತ ಇಳಿಮುಖವಾಗಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯಲಾಗಿದೆ ಎಂದು ಹೇಳಲಾಗಿದೆ. ಅದರಂತೆ ಕೊರೊನಾ ಹಿನ್ನೆಲೆ ಜಾರಿಯಲ್ಲಿದ್ದ ನೈಟ್ ಕರ್ಫ್ಯೂ ಇಂದಿನಿಂದ ಇರುವುದಿಲ್ಲ ಎಂದು ಸರ್ಕಾರ ಹೇಳಿದೆ.
ಕೊರೊನಾ ಕೇಸ್ ಇಳಿಮುಖ ಹಿನ್ನೆಲೆ ನೈಟ್ ಕರ್ಫ್ಯೂ ವಾಪಸ್ ಪಡೆಯಲಾಗಿದೆ. ನೈಟ್ ಕರ್ಫ್ಯೂ ಹಿಂಪಡೆದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾತ್ರಿ 10 ರಿಂದ ಮುಂಜಾನೆ 5 ರವರೆಗೂ ವಿಧಿಸಿದ್ದ ನೈಟ್ ಕರ್ಫ್ಯೂ ಇವತ್ತಿನಿಂದಲೇ ಇರುವುದಿಲ್ಲ ಎಂದು ಸರ್ಕಾರ ಹೇಳಿದೆ.
ವಾಟ್ಸಾಪ್ ಗ್ರೂಪ್ ಸೇರಿ: