ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಗಂಗಮತಸ್ಥರ ಸಂಘದ ವತಿಯಿಂದ ಜನವರಿ 21ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ನಿಜಶರಣ ಅಂಬಿಗರ ಚೌಡಯ್ಯ ಜಯಂತಿ” ಹಾಗೂ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಪುಣ್ಯಸ್ಮರಣೆಯ ಪ್ರಯುಕ್ತ “ಅಕ್ಷರ ದಾಸೋಹ ದಿನಾಚರಣೆ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಮಹನೀಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಗುವುದು. ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗ, ಸಮುದಾಯದ ಮುಖಂಡರು, ಕಲಾವಿದರು, ಗಣ್ಯರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx