ಲಖನೌ: ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರಾದ ಅಖಿಲೇಶ್ ಯಾದವ್ ಅವರನ್ನು ಲಖನೌದ ಅವರ ನಿವಾಸದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು.
ತಮ್ಮ ನಿವಾಸಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡ ಅಖಿಲೇಶ್ ಯಾದವ್ ಅವರು, ದೀರ್ಘಕಾಲ ಮಾತುಕತೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು; ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಕುಟುಂಬಗಳ ನಡುವಿನ ಬಾಂಧವ್ಯದ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ ಅಖಿಲೇಶ್ ಯಾದವ್ ಅವರು, ಬಹುಮುಖ್ಯವಾಗಿ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


