ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಯಾರು ಎನ್ನುವುದು ಕುತೂಹಲ ಕೆರಳಿಸಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಳಿಯ ಮಂಜುನಾಥ್ ಅವರು ಸ್ಪರ್ಧೆ ನಡೆಸಿದ್ರು. ಈ ವೇಳೆ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರು ಮಂಜುನಾಥ್ ಅವರ ಗೆಲುವಿಗೆ ಸಾಕಷ್ಟು ಶ್ರಮಿಸಿದ್ರು. ಇದೀಗ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅಖಾಡಕ್ಕೆ ಇಳಿಯೋದು ಪಕ್ಕಾ ಎನ್ನಲಾಗುತ್ತಿತ್ತು. ಆದರೆ, ಸದ್ಯದ ಬೆಳವಣೆಗೆಯನ್ನ ಗಮನಿಸಿದ್ರೆ, ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡರ ಜೊತೆಗೆ ನಿರಂತರವಾಗಿ ನಿಖಿಲ್ ಕುಮಾರಸ್ವಾಮಿ ಅವರು ಸಭೆಯನ್ನ ಮಾಡುತ್ತಿದ್ದಾರೆ. ಈ ಎಲ್ಲಾ ಬೆಳವಣೆಗೆಗಳನ್ನ ಗಮನಿಸಿದರೇ ಸಿ.ಪಿ. ಯೋಗೇಶ್ವರ್ ಗೆ ಟಿಕೆಟ್ ಅಸಾಧ್ಯ ಎನ್ನಲಾಗುತ್ತಿದೆ.
ಚನ್ನಪಟ್ಟಣದಿಂದ ನಿಖಿಲ್ ಅವರು ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬಂದಿದ್ದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಸಿ.ಪಿ.ಯೋಗೇಶ್ವರ್ ಮನವೊಲಿಸಲು ಸಲಹೆ ನೀಡಿದ್ದಾರೆನ್ನಲಾಗಿದೆ.
ಇನ್ನೊಂದೆಡೆ ಜೆಡಿಎಸ್ ಚನ್ನಪಟ್ಟಣದಲ್ಲಿ ಅಖಾಡಕ್ಕಿಳಿಯಲು ಭರ್ಜರಿ ಸಿದ್ಧತೆ ನಡೆಸಿದೆ. ಕಳೆದ ಒಂದು ತಿಂಗಳಿನಿಂದ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಂಚಾರ ಶುರು ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296