ತುರುವೇಕೆರೆ: ನನಗೆ ಕ್ಷೇತ್ರದ ಜನತೆಯ ಜೊತೆ ಒಡನಾಟವಿದ್ದು, ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನನಗೆ ನಿಮ್ಮ ಸೇವೆಯನ್ನು ಮಾಡುವ ಅವಕಾಶ ಸಿಗುತ್ತದೆ ಎಂಬ ಆಶಯವನ್ನು ಕೆ. ಆರ್. ಎಸ್. ಪಕ್ಷದ ಸಂಭಾವ್ಯ ಅಭ್ಯರ್ಥಿ ರಾಮ್ ಪ್ರಸಾದ್ ವ್ಯಕ್ತಪಡಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಸತತ ಎರಡು ವರ್ಷಗಳಿಂದ ಜಿಲ್ಲಾಧ್ಯಕ್ಷರ ನಿರ್ದೇಶನದಂತೆ ಕ್ಷೇತ್ರದ ಜನತೆಯ ನಾಡಿಮಿಡಿತ ಅರಿಯುವ ಕೆಲಸವನ್ನು ಮಾಡುತಿದ್ದೇನೆ ಹಾಗೂ ಕ್ಷೇತ್ರದ ತುಂಬಾ ಪ್ರವಾಸಮಾಡಿ ಜನರ ನಾಡಿಮಿಡಿತ ಅರಿಯುವ ಕೆಲಸ ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಕುಡಿಯುವ ನೀರಿನ ಸಮಸ್ಯೆ, ರಸ್ತೆ ಮತ್ತು ರೈತರಿಗೆ ನೀಡುವ ತ್ರೀಫೇಸ್ ವಿದ್ಯುತ್ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು. ನಮ್ಮ ತಾಲ್ಲೂಕು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಹಾಗೂ ಸರ್ಕಾರಿ ಕಚೇರಿಗಳಲ್ಲಿ ತಾಂಡವವಾಡುತ್ತಿರುವ ಲಂಚಕೋರತನವನ್ನು ದಮನ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ ಇದಕ್ಕೆಲ್ಲ ಕ್ಷೇತ್ರದ ಜನತೆಯ ಆಶೀರ್ವಾದ ಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಗಜೇಂದ್ರ ಗೌಡ, ಜಿಲ್ಲಾ ಉಸ್ತುವಾರಿ ಜ್ಞಾನ ಸಿಂಧು ಸ್ವಾಮಿ, ಜಯರಾಮ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಧರ್ಮಯ್ಯ, ಪೂರ್ಣ ಚಂದ್ರ ಹಾಗೂ ಪದಾಧಿಕಾರಿಗಳು ಮತ್ತು ಕೆ.ಆರ್.ಎಸ್. ಪಕ್ಷದ ಕಾರ್ಯಕರ್ತರುಗಳು ಹಾಜರಿದ್ದರು.
ವರದಿ: ಸುರೇಶ್ ಬಾಬು ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy