ರಾಮನಗರ: ಸಮತಾ ಸೈನಿಕ ದಳ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಹಂಸಲೇಖರವರನ್ನು ಡಾ. ಗೋವಿಂದಯ್ಯರವರ ನೇತೃತ್ವದಲ್ಲಿ ಬೆಂಬಲಿಸುವ ಕಾರ್ಯಕ್ರಮವನ್ನು ನಡೆಸಲಾಯಿತು.
ಇತ್ತೀಚೆಗೆ ಹಂಸಲೇಖ ಅವರು ನೀಡಿರುವ ಸಾಮಾಜಿಕ ಕಳಕಳಿಯ ಹೇಳಿಕೆಯನ್ನು ಮುಂದಿಟ್ಟು ಕೊಂಡು ಅವರ ಹೆಸರಿಗೆ ಮಸಿಬಳಿಯುವ ಪ್ರಯತ್ನ ನಡೆಸುತ್ತಿರುವ ಬಗ್ಗೆ ಸಂಘಟನೆಯ ಮುಖಂಡರು ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ, ಹಂಸಲೇಖರವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲೆಯ ನೂರಾರು ಮುಖಂಡರು ಭಾಗವಹಿಸಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700