ತುಮಕೂರು: ನಿಂತಿದ್ದ ಲಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ತುಮಕೂರು-ಶಿರಾ ರಾಷ್ಟ್ರೀಯ ಹೆದ್ದಾರಿಯ ಜೋಗಿಹಳ್ಳಿಯಲ್ಲಿ ನಡೆದಿದೆ.
ಬಳ್ಳಾರಿಯ ತಾವರಹಳ್ಳಿ ಮೂಲದ ನಾಗರಾಜ್ ಮೃತ ಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ತುಮಕೂರಿಂದ ಶಿರಾಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz