ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಕಾರ್ಮಿಕ ಇಲಾಖೆ ನಿರೀಕ್ಷಕ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ನಿರೀಕ್ಷಕ ಚಂದ್ರು ಕಚೇರಿಯಿಂದ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ಧಾರೆ.
ಹನೂರು ತಾಲೂಕಿನ ರಾಮಾಪುರ ಗ್ರಾಮದ ಕಬ್ಬಿಣದ ಅಂಗಡಿ ವ್ಯಾಪಾರಿ ಲಕ್ಷ್ಮಣ್ ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಹಾಕಿದ ವೇಳೆ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಇವರ ಜತೆಗೆ ಮತ್ತೊಬ್ಬ ವ್ಯಾಪಾರಿಯೂ ಅಧಿಕಾರಿಯ ಲಂಚದಾಹದಿಂದ ಬೇಸತ್ತು ಲೋಕಾಯುಕ್ತರಿಗೆ ದೂರು ನೀಡಿದ್ದರು ಎನ್ನಲಾಗಿದೆ. ದೂರು ಪಡೆದ ಲೋಕಾಯುಕ್ತರು ಕಾರ್ಯಾಚರಣೆ ನಡೆಸಿದ್ಧಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA