ನವದೆಹಲಿ: ದೆಹಲಿ ಕೋಚಿಂಗ್ ಸೆಂಟರ್ ದುರಂತ, ಅಗ್ನಿಪಥ್ ಯೋಜನೆ ಸೇರಿದಂತೆ ಹಲವು ವಿಚಾರಗಳನ್ನಿಟ್ಟುಕೊಂಡು ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಲೆ ಚಚ್ಚಿಕೊಂಡು ವಿಡಿಯೋ ವೈರಲ್ ಆಗಿದೆ.
ರಾಹುಲ್ ಗಾಂಧಿ, ಹಲ್ವಾ ಕಾರ್ಯಕ್ರಮ ದ ಫೋಟೋ ಪ್ರದರ್ಶನ ಮಾಡಿದಾಗ ನಿರ್ಮಲಾ ಸೀತಾರಾಮನ್ ಅವರು ನಗುತ್ತಾ ಮುಖ ಮುಚ್ಚಿಕೊಂಡರು. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗತೊಡಗಿದೆ ಅಲ್ಲದೇ ಹಲವು ಪರ ವಿರೋಧ ಟೀಕೆಗಳು ವ್ಯಕ್ತವಾಗಿವೆ. ಕೇಂದ್ರ ಬಜೆಟ್ ನ್ನು ಮಧ್ಯಮ ವರ್ಗ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಟೀಕಾ ಪ್ರಹಾರ ನಡೆಸಿದರು.
ರಾಹುಲ್ ಗಾಂಧಿ ಬಜೆಟ್ ಪೂರ್ವದಲ್ಲಿ ನಡೆಯುವ ಸಾಂಪ್ರದಾಯಿಕ ಹಲ್ವಾ ಸಮಾರಂಭದ ಪೋಸ್ಟರ್ ನ್ನು ಪ್ರದರ್ಶಿಸಿದ್ದು, ಬಜೆಟ್ ತಯಾರಿಕೆಯ ತಂಡದಲ್ಲಿದ್ದ 20 ಅಧಿಕಾರಿಗಳ ಪೈಕಿ ದಲಿತರು, ಒಬಿಸಿ, ಆದಿವಾಸಿಗಳು ಇಲ್ಲವೇ ಇಲ್ಲ. 20 ಅಧಿಕಾರಿಗಳ ಪೈಕಿ ಯಾರೊಬ್ಬರೂ ಹಿಂದುಳಿದ ವರ್ಗ, ದಲಿತ ಹಾಗೂ ಆದಿವಾಸಿ ಸಮುದಾಯಕ್ಕೆ ಸೇರಿದವರು ಇಲ್ಲ. ನಾನು ಬೇಕಿದ್ದರೆ ಅವರ ಹೆಸರುಗಳನ್ನೂ ಹೇಳಬಲ್ಲೆ ಎಂದರು. ಈ ವೇಳೆ ರಾಹುಲ್ ಗಾಂಧಿ ಈ ಹೇಳಿಕೆ ನೀಡುತ್ತಿದ್ದಂತೆ ನಿರ್ಮಲಾ ಸೀತಾರಾಮನ್ ಅವರು ಹಣೆ ಚಚ್ಚಿಕೊಂಡು ನಕ್ಕ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA