ಇಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಪೂರ್ಣ ಬಜೆಟ್ ಇದಾಗಿದೆ. ನಿನ್ನೆ (ಜ.31) ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2022-23 ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಿದರು.
ಇನ್ನು ಈ ವರ್ಷ ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆ ಚುನಾವಣಾ ರಾಜ್ಯಗಳಿಗೆ ಹಲವು ಯೋಜನೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಮುಂದಿನ ವರ್ಷ ಲೋಕಸಭೆ ಚುನಾವಣೆ ಇರುವುದರಿಂದ ಜನರಿಂದ ಹೆಚ್ಚಿನ ನಿರೀಕ್ಷೆ ಇದ್ದು, ಎಂದಿನಂತೆ ಮಧ್ಯಮ ವರ್ಗದ ಜನತೆ ತೆರಿಗೆ ವಿನಾಯಿತಿಗೆ ಕಾಯುತ್ತಿದ್ದಾರೆ. ಇದೀಗ ಕೇಂದ್ರ ಬಜೆಟ್ ಅಂಕಿತ ಪಡೆದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನದತ್ತ ತೆರಳಿದ್ದು ಕೆಲವೇ ಕ್ಷಣಗಳಲ್ಲಿ ಕೇಂದ್ರ ಸಂಪುಟ ಸಭೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


