ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಶ್ರೀಶೈಲ ಸರ್ಕಲ್ ಮತ್ತು ಚರ್ಚ್ ರಸ್ತೆಯಲ್ಲಿರುವ ವಿವಿಧ ಅಂಗಡಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮತ್ತು ಪ್ಲಾಸ್ಟಿಕ್ ಲೋಟ ಮಾರಾಟಗಾರರ ಮೇಲೆ ಪೌರಾಯುಕ್ತರಾದ ಡಿ.ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಮಾಲಿಕರಿಂದ 7000 ರೂ. ದಂಡ ವಸೂಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಸುನಿಲ್ ಕುಮಾರ್, ಅಂಜಿನಪ್ಪ, ಕಿರಿಯ ಆರೋಗ್ಯ ನಿರೀಕ್ಷಕರಾದ ಅಶೋಕ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB