ಶ್ರವಣಬೆಳಗೊಳ: ಶ್ರೀ ದಿಗಂಬರ ಜೈನ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧ್ಯಕ್ಷರಾಗಿದ್ದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಶಿಲಾಮಯ ನಿಷಿಧಿ ಮಂಟಪ ಲೋಕಾರ್ಪಣೆ ಹಿನ್ನೆಲೆಯಲ್ಲಿ ಗುರುವಾರ ಶ್ರೀ ಚರಣ ಪಾದುಕೆ ಪ್ರತಿಷ್ಠಾಪನೆಯು ಸ್ವಸ್ತಿಶ್ರೀ ಅಭಿನವ ಚಾರುಶ್ರೀಗಳವರ ನೇತೃತ್ವದಲ್ಲಿ ನೆರವೇರಿತು.
ಭೂಮಿ ಶುದ್ದಿ, ಮಂಟಪ ಶುದ್ದಿ, ಗಣಧರವಲಯ ಆರಾಧನೆ, ಅಷ್ಟವಿಧಾರ್ಚನೆ, ಚತುರ್ ದಿಕ್ಷು ಹೋಮ, ಧಾಮ ಸಂಪ್ರೋಕ್ಷಣೆ ಹಾಗೂ ವಿಧಿಪರ‍್ವಕ ಶ್ರೀಚರಣ ಪಾದುಕೆ ಪ್ರತಿಷ್ಠಾಪನೆ ಕಾರ್ಯಗಳು ಪೂಜಾ ವಿಧಿ–ವಿಧಾನಗಳೊಂದಿಗೆ ಸಂಪನ್ನಗೊಂಡಿತು.
ಈ ಸಂದರ್ಭದಲ್ಲಿ ಸಚಿವ ಡಿ.ಸುಧಾಕರ್ ಉಪಸ್ಥಿತರಿದ್ದರು. ಕಾರ್ಕಳದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಕನಕಗಿರಿಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಹಂತಗಿರಿಯ ಸ್ವಸ್ತಿಶ್ರೀ ದವಳಕೀರ್ತಿ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿಯ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಮೂಡಬಿದಿರೆಯ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ, ಮೇಲ್ ಚಿತ್ತಮೂರ್ ನ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ, ವರೂರಿನ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ, ಹೊಂಬುಜದ ಸ್ವಸ್ತಿಶ್ರೀ ದೇವೇಂದ್ರ ಭಟ್ಟಾರಕ ಸ್ವಾಮೀಜಿ, ಸೋಂದಾದ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ, ನರಸಿಂಹರಾಜಪುರದ ಸ್ವಸ್ತಿಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ, ಲಕ್ಕವಳ್ಳಿಯ ವೃಷಭಸೇನಾ ಭಟ್ಟಾರಕ ಸ್ವಾಮೀಜಿ, ನಾಂದಣಿಯ ಜಿನಸೇನ ಭಟ್ಟಾರಕ ಸ್ವಾಮೀಜಿ, ಆರತಿಪುರದ ಸ್ವಸ್ತಿಶ್ರೀ ಸಿದ್ದಾಂತ ಕೀರ್ತಿ ಭಟ್ಟಾರಕ ಸ್ವಾಮೀಜಿ, ಕೊಲ್ಹಾಪುರದ ಸ್ವಸ್ತಿಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ, ವಿಚಾರಪಟ್ಟ ಕ್ಷುಲ್ಲಕಶ್ರೀ ಪ್ರಮೆಯಸಾಗರ ಸ್ವಾಮೀಜಿಯವರು ಸಾನಿಧ್ಯ ವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx