ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಗೊಂದಲಗಳಿಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆದಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.
ಆದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕು. ವೋಟುತರುವವರನ್ನು ನೇಮಕ ಮಾಡಬೇಕು. ಇಲ್ಲವೇ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುವುದಾದರೆ ಅದನ್ನು ಹೈಕಮಾಂಡ್ ಸ್ಪಷ್ಟವಾಗಿ ಹೇಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ ನೀಡಿದ್ದರು.
ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಚರ್ಚೆ ಆರಂಭವಾಗಿತ್ತು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅಧ್ಯಕ್ಷರ ಬದಲಾವಣೆ ಮಾಡಬೇಕು ಎನ್ನುವುದಾದರೆ ಅವರು ಸಭೆಗೆ ಯಾಕೆ ಬರುತ್ತಿದ್ದರು? ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲಗಳು ಇಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯೂ ಇಲ್ಲ ಎಂದು ತಿಳಿಸುವ ಮೂಲಕ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx