ಸರಗೂರು: ಹಂಚೀಪುರ ಗ್ರಾಮದ ಕೆರೆ ಪಕ್ಕದಲ್ಲಿ ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ಮಾಡಲು ಮುಂದಾಗಿಲ್ಲ, ಹಂಚೀಪುರ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ರಸ್ತೆ ತಡೆದು ಅರಣ್ಯ ಇಲಾಖೆ ಅಧಿಕಾರಿಗಳು ಬರಬೇಕು ಎಂದು ಪಟ್ಟು ಹಿಡಿದು ಶನಿವಾರದಂದು ಪ್ರತಿಭಟನೆ ನಡೆಸಿದರು.
ತಾಲೂಕಿನ ಪಟ್ಟಣದ ಬಿ.ಮಟಕರೆ ಮತ್ತು ಸರಗೂರು ಮುಖ್ಯ ರಸ್ತೆಯ ಬಳಿ ಹಂಚೀಪುರ ಗ್ರಾಮದ ಪಾಪಣ್ಣ ಮತ್ತು ಪುಟ್ಟಯ್ಯ ಜಮೀನು ಒಂದದರಲ್ಲಿ ಬೆಳ್ಳಿಗೆ ಜಮೀನಲ್ಲಿ ನೀರು ಹಾರಿಸಲು ಹೋಗಿದ ಸಂದರ್ಭದಲ್ಲಿ ಹುಲಿ ಕಂಡು ಹೊಡಿಹೋಗಿ ಗ್ರಾಮಸ್ಥರಿಗೆ ಗಮನಕ್ಕೆ ತಂದು ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಗಮನಕ್ಕೂ ತಂದಿದ್ದರೂ ಕೂಂಬಿಂಗ್ ಕಾರ್ಯಾಚರಣೆ ಮಾಡಿಲ್ಲ . ಗ್ರಾಮಸ್ಥರು ಜಮೀನಲ್ಲಿ ಬೆಳ್ಳಿಗೆನಿಂದ ಸಂಜೆವರೆಗೆ ಕಾದರೂ ಯಾವುದೇ ಇಲಾಖೆ ಅಧಿಕಾರಿಗಳು ಬಾರದೆ ನಿರ್ಲಕ್ಷ್ಯ ಮಾಡಿದ್ದಾರೆ.
ನಂತರ ಅಧಿಕಾರಿಗಳು ಸ್ಥಳಕ್ಕೆ ಬಾರದೆ ಇರುವುದರಿಂದ ಹಂಚೀಪುರ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಸೇರಿಕೊಂಡು ಬಿ ಮಟಕರೆ ಮತ್ತು ಸರಗೂರು ಮುಖ್ಯ ರಸ್ತೆಯನ್ನು ಅಡ್ಡಗಟ್ಟಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಈ ಪ್ರತಿಭಟನೆಯಿಂದ ವಿವಿಧ ಗ್ರಾಮಗಳಿಗೆ ಹೋಗಬೇಕಾಗಿದ ಸಾರ್ವಜನಿಕರು ಹಾಗೂ ಶಾಲೆಯ ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳಿಗೆ ಹೋಗಲು ಹರಸಾಹಸ ಪಡಬೇಕಾಯಿತು.
ಅಧಿಕಾರಿಗಳ ವಿರುದ್ಧ ಆಕ್ರೋಶ:
ಗ್ರಾಮದ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಅರಣ್ಯ ಇಲಾಖೆ ಡ್ರೋನ್ ಕ್ಯಾಮರಾದಲ್ಲಿ ಹುಲಿ ಸೆರೆಯಾಗಿದೆ. ಅದರೆ ಕೂಂಬಿಂಗ್ ಕಾರ್ಯಾಚರಣೆ ಮಾಡಿ ಎಂದು ಹೇಳಿದರೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಹುಲಿ ಹಾವಳಿ ಹೆಚ್ಚಾಗಿತ್ತು. ಜಾನುವಾರುಗಳನ್ನು ನಿರಂತರವಾಗಿ ಬಲಿ ಪಡೆಯುತ್ತಿದ್ದ ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು. ಬಳಿಕ ಹುಲಿ ಸೆರೆಗೆ ಅರಣ್ಯ ಇಲಾಖೆ ಸಾಕಾನೆಗಳ ಮೂಲಕ ಕೂಂಬಿಂಗ್ ಆರಂಭಿಸಿಲ್ಲ. ಹೆಗ್ಗನೂರು ಮೂರು ದಿನಗಳ ಹಿಂದಷ್ಟೇ ಗ್ರಾಮದ ಸರಗೂರಯ್ಯ ಎಂಬವರು ದನ ಮೇಹಿಸಲು ಹೋಗಿದ್ದು ವೇಳೆ ಮಧ್ಯಾಹ್ನ ವೇಳೆಯೇ ಪುಟ್ಟಮಾದು ಎಂಬವರ ಹಸುವಿನ ಮೇಲೆ ಹುಲಿ ದಾಳಿ ಮಾಡಿದ್ದು ಕಣ್ಣಾರೆ ಕಂಡ ಸರಗೂರಯ್ಯ ಹುಲಿ ವಿಚಾರವನ್ನು ತಿಳಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯುವ ಬದಲು ಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯರು ದೂರಿದರು.
ಸರಗೂರು ಕಾಡಂಚಿನ ಭಾಗಗಳಲ್ಲಿ ಹುಲಿಗಳ ಮನುಷ್ಯರ ಮೇಲೆಯೇ ದಾಳಿಗೆ ಮುಂದಾಗುತ್ತಿದ್ದು, ಇದರಿಂದಾಗಿ ಜನರು ಜಮೀನುಗಳಿಗೆ ಹೋಗಿ ಕೆಲಸ ಮಾಡಲು ಆತಂಕಪಡುವಂತಾಗಿದೆ ಎಂದರು.
ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಹಾಗೂ ಪಿಎಸ್ ಐ ಚಂದ್ರ ಹಾಸ ಪ್ರತಿಭಟನಾಕಾರರ ಬಳಿ, ಸಾರ್ವಜನಿಕರಿಗೆ ತಮ್ಮ ತಮ್ಮ ಗ್ರಾಮಗಳಿಗೆ ಹೋಗಲು ತೊಂದರೆ ಉಂಟಾಗಿದೆ ಅದರಿಂದ ರಸ್ತೆ ತಡೆ ಕೈಬಿಟ್ಟುವಂತೆ ಮನವೊಲಿಸಲು ಯತ್ನಿಸಿದರು. ಆದರೆ ಪಟ್ಟು ಹಿಡಿದ ರೈತರು ಅರಣ್ಯ ಇಲಾಖೆ ಅಧಿಕಾರಿಗಳು ಬರಬೇಕು ಎಂದು ಒತ್ತಾಯಿಸಿ ಪ್ರತಿಭಟನೆಯನ್ನು ಮುಂದುವರಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಹುಲಿಯನ್ನು ಆದಷ್ಟು ಬೇಗ ಸೆರೆ ಹಿಡಿದು ರೈತರ ಪ್ರಾಣ ಹಾನಿ ತಪ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಎಸಿಎಫ್ ಸುಮೀತ್ರ ಪ್ರತಿಭಟನಾಕಾರ ಸಮಸ್ಯೆಗಳನ್ನು ಸ್ವೀಕರಿಸಿ ನಂತರ ಮಾತನಾಡಿ, ಈ ಭಾಗದಲ್ಲಿ ಹುಲಿ ಇರುವಿಕೆಯನ್ನು ನಮ್ಮ ಸಿಬ್ಬಂದಿಗಳು ಗಮನಕ್ಕೆ ತಂದಿದ್ದಾರೆ. ಅದರಂತೆ ಸಿಬ್ಬಂದಿಗಳು ಕೂಂಬಿಂಗ್ ಕಾರ್ಯಾಚರಣೆ ಮಾಡುತ್ತಿದ್ದಾರೆ. ನಾಳೆಯಿಂದಲೇ ಸಾಕಾನೆ ಬಳಸಿಕೊಂಡು ಹುಲಿ ಸೆರೆ ಹಿಡಿಯಲು ಮುಂದಾಗುತ್ತೇವೆ ಎಂದು ಭರವಸೆ ನೀಡಿದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಕೈಬಿಟ್ಟರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


