nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    ಜಿಲ್ಲಾ ಸುದ್ದಿ November 23, 2025

    ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ

    By adminNovember 23, 2025No Comments2 Mins Read
    protest sargur

    ಸರಗೂರು:  ಹಂಚೀಪುರ ಗ್ರಾಮದ ಕೆರೆ ಪಕ್ಕದಲ್ಲಿ ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ಮಾಡಲು ಮುಂದಾಗಿಲ್ಲ, ಹಂಚೀಪುರ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ರಸ್ತೆ ತಡೆದು ಅರಣ್ಯ ಇಲಾಖೆ ಅಧಿಕಾರಿಗಳು ಬರಬೇಕು ಎಂದು ಪಟ್ಟು ಹಿಡಿದು ಶನಿವಾರದಂದು ಪ್ರತಿಭಟನೆ ನಡೆಸಿದರು.

    ತಾಲೂಕಿನ ಪಟ್ಟಣದ ಬಿ.ಮಟಕರೆ ಮತ್ತು ಸರಗೂರು ಮುಖ್ಯ ರಸ್ತೆಯ ಬಳಿ ಹಂಚೀಪುರ ಗ್ರಾಮದ ಪಾಪಣ್ಣ ಮತ್ತು ಪುಟ್ಟಯ್ಯ ಜಮೀನು ಒಂದದರಲ್ಲಿ ಬೆಳ್ಳಿಗೆ ಜಮೀನಲ್ಲಿ ನೀರು ಹಾರಿಸಲು ಹೋಗಿದ ಸಂದರ್ಭದಲ್ಲಿ ಹುಲಿ ಕಂಡು ಹೊಡಿಹೋಗಿ ಗ್ರಾಮಸ್ಥರಿಗೆ ಗಮನಕ್ಕೆ ತಂದು ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಗಮನಕ್ಕೂ ತಂದಿದ್ದರೂ ಕೂಂಬಿಂಗ್ ಕಾರ್ಯಾಚರಣೆ ಮಾಡಿಲ್ಲ . ಗ್ರಾಮಸ್ಥರು ಜಮೀನಲ್ಲಿ ಬೆಳ್ಳಿಗೆನಿಂದ ಸಂಜೆವರೆಗೆ ಕಾದರೂ ಯಾವುದೇ ಇಲಾಖೆ ಅಧಿಕಾರಿಗಳು ಬಾರದೆ ನಿರ್ಲಕ್ಷ್ಯ ಮಾಡಿದ್ದಾರೆ.


    Provided by
    Provided by

    ನಂತರ ಅಧಿಕಾರಿಗಳು ಸ್ಥಳಕ್ಕೆ ಬಾರದೆ ಇರುವುದರಿಂದ ಹಂಚೀಪುರ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಸೇರಿಕೊಂಡು ಬಿ ಮಟಕರೆ ಮತ್ತು ಸರಗೂರು ಮುಖ್ಯ ರಸ್ತೆಯನ್ನು ಅಡ್ಡಗಟ್ಟಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಈ ಪ್ರತಿಭಟನೆಯಿಂದ ವಿವಿಧ ಗ್ರಾಮಗಳಿಗೆ ಹೋಗಬೇಕಾಗಿದ ಸಾರ್ವಜನಿಕರು ಹಾಗೂ ಶಾಲೆಯ ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳಿಗೆ ಹೋಗಲು ಹರಸಾಹಸ ಪಡಬೇಕಾಯಿತು.

    ಅಧಿಕಾರಿಗಳ ವಿರುದ್ಧ ಆಕ್ರೋಶ:

    ಗ್ರಾಮದ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಅರಣ್ಯ ಇಲಾಖೆ ಡ್ರೋನ್ ಕ್ಯಾಮರಾದಲ್ಲಿ ಹುಲಿ ಸೆರೆಯಾಗಿದೆ.  ಅದರೆ ಕೂಂಬಿಂಗ್ ಕಾರ್ಯಾಚರಣೆ ಮಾಡಿ ಎಂದು ಹೇಳಿದರೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಹುಲಿ ಹಾವಳಿ ಹೆಚ್ಚಾಗಿತ್ತು.  ಜಾನುವಾರುಗಳನ್ನು ನಿರಂತರವಾಗಿ ಬಲಿ ಪಡೆಯುತ್ತಿದ್ದ ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು. ಬಳಿಕ ಹುಲಿ ಸೆರೆಗೆ ಅರಣ್ಯ ಇಲಾಖೆ ಸಾಕಾನೆಗಳ ಮೂಲಕ ಕೂಂಬಿಂಗ್‌ ಆರಂಭಿಸಿಲ್ಲ.    ಹೆಗ್ಗನೂರು ಮೂರು ದಿನಗಳ ಹಿಂದಷ್ಟೇ ಗ್ರಾಮದ ಸರಗೂರಯ್ಯ ಎಂಬವರು ದನ ಮೇಹಿಸಲು ಹೋಗಿದ್ದು ವೇಳೆ ಮಧ್ಯಾಹ್ನ ವೇಳೆಯೇ ಪುಟ್ಟಮಾದು ಎಂಬವರ ಹಸುವಿನ  ಮೇಲೆ ಹುಲಿ  ದಾಳಿ ಮಾಡಿದ್ದು ಕಣ್ಣಾರೆ ಕಂಡ ಸರಗೂರಯ್ಯ ಹುಲಿ ವಿಚಾರವನ್ನು ತಿಳಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯುವ ಬದಲು ಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯರು ದೂರಿದರು.

    ಸರಗೂರು ಕಾಡಂಚಿನ ಭಾಗಗಳಲ್ಲಿ ಹುಲಿಗಳ ಮನುಷ್ಯರ ಮೇಲೆಯೇ ದಾಳಿಗೆ ಮುಂದಾಗುತ್ತಿದ್ದು, ಇದರಿಂದಾಗಿ ಜನರು ಜಮೀನುಗಳಿಗೆ ಹೋಗಿ ಕೆಲಸ ಮಾಡಲು ಆತಂಕಪಡುವಂತಾಗಿದೆ ಎಂದರು.

    ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಹಾಗೂ ಪಿಎಸ್ ಐ ಚಂದ್ರ ಹಾಸ ಪ್ರತಿಭಟನಾಕಾರರ ಬಳಿ, ಸಾರ್ವಜನಿಕರಿಗೆ ತಮ್ಮ ತಮ್ಮ ಗ್ರಾಮಗಳಿಗೆ ಹೋಗಲು ತೊಂದರೆ ಉಂಟಾಗಿದೆ ಅದರಿಂದ ರಸ್ತೆ ತಡೆ ಕೈಬಿಟ್ಟುವಂತೆ ಮನವೊಲಿಸಲು ಯತ್ನಿಸಿದರು. ಆದರೆ ಪಟ್ಟು ಹಿಡಿದ ರೈತರು ಅರಣ್ಯ ಇಲಾಖೆ ಅಧಿಕಾರಿಗಳು ಬರಬೇಕು ಎಂದು ಒತ್ತಾಯಿಸಿ  ಪ್ರತಿಭಟನೆಯನ್ನು ಮುಂದುವರಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಹುಲಿಯನ್ನು ಆದಷ್ಟು ಬೇಗ ಸೆರೆ ಹಿಡಿದು ರೈತರ ಪ್ರಾಣ ಹಾನಿ ತಪ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

    ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಎಸಿಎಫ್ ಸುಮೀತ್ರ ಪ್ರತಿಭಟನಾಕಾರ ಸಮಸ್ಯೆಗಳನ್ನು ಸ್ವೀಕರಿಸಿ ನಂತರ ಮಾತನಾಡಿ, ಈ ಭಾಗದಲ್ಲಿ ಹುಲಿ ಇರುವಿಕೆಯನ್ನು ನಮ್ಮ ಸಿಬ್ಬಂದಿಗಳು ಗಮನಕ್ಕೆ ತಂದಿದ್ದಾರೆ. ಅದರಂತೆ ಸಿಬ್ಬಂದಿಗಳು ಕೂಂಬಿಂಗ್ ಕಾರ್ಯಾಚರಣೆ ಮಾಡುತ್ತಿದ್ದಾರೆ. ನಾಳೆಯಿಂದಲೇ ಸಾಕಾನೆ ಬಳಸಿಕೊಂಡು ಹುಲಿ ಸೆರೆ ಹಿಡಿಯಲು ಮುಂದಾಗುತ್ತೇವೆ ಎಂದು ಭರವಸೆ ನೀಡಿದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಕೈಬಿಟ್ಟರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.