ತುಮಕೂರು : ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಜೂನ್ 25ರಂದು ತುಮಕೂರು ಜಿಲ್ಲಾ ಬಂದ್’ಗೆ ಕರೆ ನೀಡಲಾಗಿದ್ದು, ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ.
ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಸರ್ಕಾರಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಖಾಸಗಿಗೆ ರಜೆ: ಖಾಸಗಿ ಮತ್ತು ಅನುದಾನಿತ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ರೂಪ್ಪಾ(ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳ ಒಕ್ಕೂಟ) ಅಧ್ಯಕ್ಷ ಹಾಲನೂರು ಲೇಪಾಕ್ಷ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲಾ ಬಂದ್ ಬೆಂಬಲಿಸಿ ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA