nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    ತುಮಕೂರು May 12, 2026

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    By adminMay 12, 2026No Comments2 Mins Read

    ತುಮಕೂರು: ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಆಶಾ ಕಾರ್ಯಕರ್ತೆಯರ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎರಡು ವೇತನಗಳು ಬಾಕಿ ಇದ್ದು ಈ ಬಗ್ಗೆ ವಿಳಂಬ ನೀತಿ ತೋರಿಸಿರುವುದನ್ನು ಖಂಡಿಸಲಾಯಿತು. ಕೂಡಲೇ ಎಲ್ಲಾ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಲಾಯಿತು. ದಿನನಿತ್ಯ ವಿವಿಧ ಅವಶ್ಯಕ ಆರೋಗ್ಯ ಸೇವೆ ತೆಗೆದುಕೊಳ್ಳುವ ಇಲಾಖೆ ಇತ್ತೀಚೆಗೆ ಮತ್ತೊಂದು ಆದೇಶವನ್ನು ಹೊರಡಿಸಿ 9 ಚಟುವಟಿಕೆಗಳ ಕೇಂದ್ರದ ಪ್ರೋತ್ಸಾಹ ಧನವನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ಒಬ್ಬ ಆಶಾ ಕಾರ್ಯಕರ್ತೆಗೆ ಸರಿಸುಮಾರು 500 ರಿಂದ 1000ರೂಪಾವರೆಗೂ ನಷ್ಟವಾಗುತ್ತದೆ ಎಂದು ಆಶಾ ಸಂಘದ ಜಿಲ್ಲಾ ಸಂಚಾಲಕಿ ಮಂಜುಳ ಗೋನವಾರ ತಿಳಿಸಿದರು.

    ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ತುಮಕೂರಿನ ಟೌನ್ ಹಾಲ್ ವೃತ್ತದಿಂದ ಡಿಸಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಆರೋಗ್ಯ ಅಭಿಯಾನದ ಆಯುಕ್ತರಿಗೆ ಮನವಿ ಕಳುಹಿಸಲಾಯಿತು.


    Provided by
    Provided by

    ಆಶಾ ಕಾರ್ಯಕರ್ತೆಯರಿಗೆ ಅವರು ಮಾಡಿದಷ್ಟು ಕೆಲಸಕ್ಕೆ ಹಣ ಬರುತ್ತಿಲ್ಲ. ಡಾಟಾ ಎಂಟ್ರಿ ಸಮಸ್ಯೆ ಒಂದು ಕಡೆಯಾದರೆ ಎಷ್ಟೋ ಕಡೆ ಎಂಟ್ರಿ ಮಾಡಿದರೂ ಹಣ ಬರುವುದಿಲ್ಲ. ಆದ್ದರಿಂದ ಮಾಡಿದ ಕೆಲಸಕ್ಕೆ ಮಾಡಿದ ಚಟುವಟಿಕೆಗಳಿಗೆ ಪೂರ್ಣ ಪ್ರೋತ್ಸಾಹ ಧನದ ಹಣ ಬರುವಂತೆ ಕ್ರಮ ವಹಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಗ್ಯಾರಂಟಿ ವಾಗ್ದಾನ ಹತ್ತು ಸಾವಿರ ನಿಗದಿ ಮಾಡಬೇಕು ಎಂದು ಹೇಳಿದರು.

    ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿಯವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲಾ ಹಂತದಲ್ಲಿ ಬಗೆಹರಿಸುವ ಸಮಸ್ಯೆಗಳಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿದ್ದ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಚಂದ್ರಶೇಖರ್ ಅವರು ಮಾತನಾಡಿ, ಬಾಕಿ ವೇತನದ ಬಗ್ಗೆ ವಿಷಯ ತಿಳಿಸಿದರು ಒಂದೆರಡು ದಿನಗಳಲ್ಲಿ ನಿಶ್ಚಿತ ಗೌರವ ಧನ ಬಿಡುಗಡೆಯಾಗುವುದು ಕೇಂದ್ರದ ಕೆಲವು ಪ್ರೋತ್ಸಾಹ ಧನಗಳು ಇನ್ನು ಹದಿನೈದು ದಿನಗಳಾಗಬಹುದು ಬಿಡುಗಡೆಯಾಗಲು ಎಂದು ತಿಳಿಸಿದರು.

    ಆಶಾ ಸಂಘದ ಜಿಲ್ಲಾ ಸಲಹೆಗಾರರಾದ ಎಂ.ವಿ.ಕಲ್ಯಾಣಿ, ಜಿಲ್ಲಾಧ್ಯಕ್ಷ ಎಂ. ಆರ್.ನಿರ್ಮಲ್ ಅವರು ಹೋರಾಟವನ್ನು ಉದ್ದೇಶಿಸಿ ಮಾತನಾಡಿದರು. ಈ ಪ್ರತಿಭಟನೆಯ ನೇತೃತ್ವವನ್ನು ತಾಲೂಕು, ಜಿಲ್ಲಾ ಮುಖಂಡರು ವಹಿಸಿದ್ದರು. ಜಿಲ್ಲಾ ಸಮಿತಿಯ ನಾಯಕಿಯರಾದ ಶಾರದಮ್ಮ, ಯಶೋದಮ್ಮ, ವಸಂತ ಕುಣಿಗಲ್, ವಸಂತ, ಸುನಂದ, ಮೀನಾಕ್ಷಿ, ಗೌರಮ್ಮ, ಮಹದೇವಮ್ಮ, ಆಶಾ, ಕಲಾ, ಯಶೋದಮ್ಮ, ಮುದ್ದಮ್ಮ, ಸಿದ್ದಗಂಗಮ್ಮ, ಕಮಲಮ್ಮ, ಲೀಲಾ, ಸೇರಿದಂತೆ ನೂರಾರು ಜನ ಕಾರ್ಯಕರ್ತೆಯರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.