ಬೆಂಗಳೂರು: ಪಕ್ಷಕ್ಕೆ ಬರುವಂತೆ ಶ್ರೀರಾಮುಲು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಶ್ರೀರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆಗೆ ವಿಧಾನಸೌಧದ ಬಳಿ ಸ್ಪಷ್ಟನೆ ನೀಡಿದ ಅವರು, ಆತ ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾನೆ. ಆತ ಆ ಪಕ್ಷದಲ್ಲಿಯೇ ಇರಲಿಲ್ಲ. ಈಗ ಆ ಪಕ್ಷಕ್ಕೆ ಕಾಲಿಟ್ಟು, ಆ ಮನೆಯನ್ನೇ ಒಡೆಯುವ ಪ್ರಯತ್ನ ಮಾಡುತ್ತಿದ್ದಾನೆ ಎಂದರು.
ನಾನು ಆತನ ಹೆಸರು ಹೇಳಿ ಅವನನ್ನು ಏಕೆ ದೊಡ್ಡ ಮನುಷ್ಯನನ್ನಾಗಿ ಮಾಡಲಿ? ಆತ ನನ್ನ ಹೆಸರು ತೆಗೆದುಕೊಂಡರೆ ದೊಡ್ಡವನಾಗುತ್ತಾನೆಯೇ? ನಾನು ಸಂಪರ್ಕದಲ್ಲಿ ಇರುವುದನ್ನು ಆತ ನೋಡಿದ್ದಾನೆಯೇ? ಆತನೇ ಯಾರ ಜೊತೆ ಸಂಪರ್ಕದಲ್ಲಿ ಇದ್ದ ಎಂಬುದನ್ನು ಈಗ ಚರ್ಚೆ ಮಾಡುವುದು ಬೇಡ. ನಾನು ಯಾವುದನ್ನು ಬಹಿರಂಗಗೊಳಿಸಲು ಹೋಗುವುದಿಲ್ಲ ಎಂದು ಕಿಡಿಕಾರಿದರು.
ಈ ಹಿಂದೆ ಚುನಾವಣೆಗೆ ಮುಂಚಿತವಾಗಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದು ನಿಜ. ಆಗ ಅವರು ಬರುವುದಿಲ್ಲ, ಬಿಜೆಪಿಯಲ್ಲಿಯೇ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು. ನಾನು ಆ ರೀತಿ ಸುಮಾರು 50 ಜನಕ್ಕೆ ಕೇಳಿದ್ದೇನೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4