nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರಿಂದ ಮುಂದಿನ ಎರಡು ತಿಂಗಳು ಸಾಲ ವಸೂಲಾತಿ ಮಾಡುವಂತಿಲ್ಲ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    ಕೊರಟಗೆರೆ May 7, 2024

    ರೈತರಿಂದ ಮುಂದಿನ ಎರಡು ತಿಂಗಳು ಸಾಲ ವಸೂಲಾತಿ ಮಾಡುವಂತಿಲ್ಲ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    By adminMay 7, 2024No Comments2 Mins Read

    ತುಮಕೂರು: ಬರ ಪರಿಸ್ಥಿತಿಯಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮುಂದಿನ 2 ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿ, ಖಾಸಗಿ ಲೇವಾದೇವಿಗಾರರು ಹಾಗೂ ಸಾಲದಾತರಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ರಾತ್ರಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತಾಗಿ ವಿಡಿಯೋ ಕಾರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಮಳೆ ಬಾರದೆ ಈಗಾಗಲೇ ರೈತರು ಸಂಕಷ್ಟದಲ್ಲಿದ್ದಾರೆ. ಸಂಕಷ್ಟದಿಂದ ಹೊರಬರಲು ಮಾಡಿರುವ ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಬೆಳೆಯಿಲ್ಲದೆ ಕಂಗೆಟ್ಟಿರುವ ಇಂತಹ ಪರಿಸ್ಥಿತಿಯಲ್ಲಿ ಸಾಲ ಮರುಪಾವತಿ ಮಾಡಬೇಕೆಂದು ಯಾವುದೇ ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಕಿರುಕುಳ ನೀಡಬಾರದು.


    Provided by
    Provided by

    ಸಾಲ ವಸೂಲಿಗಾಗಿ ರೈತರಿಗೆ ತೊಂದರೆ ಕೊಡುವುದು ಕಂಡು ಬಂದರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

    1,32,332ರ ರೈತರಿಗೆ ಬರ ಪರಿಹಾರ:

    ಜಿಲ್ಲೆಯಲ್ಲಿ ಬರ ಪರಿಹಾರವಾಗಿ ಮೊದಲ ಹಂತದಲ್ಲಿ 1,86,193 ರೈತರಿಗೆ 33.52ಕೋಟಿ ರೂ.ಗಳನ್ನು ವಿತರಿಸಲಾಗಿದೆ. ಎರಡನೇ ಹಂತದಲ್ಲಿ 1,32,332 ರೈತರಿಗೆ 74.21ಕೋಟಿ ರೂ.ಗಳ ಬರ ಪರಿಹಾರ ನೀಡಲು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇನ್ನೆರಡು ದಿನಗಳಲ್ಲಿ 2ನೇ ಹಂತದ ಪರಿಹಾರದ ಹಣ ರೈತರ ಖಾತೆಗೆ ಜಮೆಯಾಗಲಿದೆ. ಜಿಲ್ಲೆಯಲ್ಲಿ 39089 ಪ್ರಕರಣಗಳಲ್ಲಿ ರೈತರು ತಮ್ಮ ಆಧಾರ್ ನಂಬರ್ ಅನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಸದೇ ಇರುವುದರಿಂದ ಹಾಗೂ ಬ್ಯಾಂಕ್ ಖಾತೆ ಸಕ್ರಿಯವಾಗಿರದ ಕಾರಣ ನೇರವಾಗಿ ರೈತರ ಖಾತೆಗೆ ಪರಿಹಾರವನ್ನು ಪಾವತಿಸಲು ಸಾಧ್ಯವಾಗಿರುವುದಿಲ್ಲ.

    ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಹಾಗೂ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ನ್ಯೂನ್ಯತೆಗಳನ್ನು ಸರಿಪಡಿಪಡಿಸಿಕೊಳ್ಳುವ ಬಗ್ಗೆ ರೈತರಿಗೆ ಅರಿವು ಮೂಡಿಸಲು ಸಂಬಂಧಿಸಿದ ಕಂದಾಯ ಹಾಗೂ ಕೃಷಿ ಇಲಾಖೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ ಕಳೆದ 3 ದಿನಗಳಲ್ಲಿ ಜಿಲ್ಲೆಯ ತಿಪಟೂರು ತಾಲೂಕಿನ ಮಹಿಳೆ ಹಾಗೂ ಕೊರಟಗೆರೆ ತಾಲೂಕಿನ ಒಬ್ಬ ರೈತ ಸೇರಿದಂತೆ ಇಬ್ಬರು ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ. ಯಾವುದೇ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಪಡೆದವರಿಂದ ವಸೂಲಾತಿಗಾಗಿ ಮನೆಗೆ ಭೇಟಿ ನೀಡಿ ಮಾನಸಿಕ ನಿಂದನೆ ಮಾಡಿದರೆ ಅಂಥವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುವುದು.

    ಇಂಥ ಪ್ರಕರಣಗಳು ಕಂಡು ಬಂದರೆ ಕೂಡಲೇ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ ಮಾಹಿತಿ ನೀಡಿದರೆ ಪೊಲೀಸ್ ಅಧಿಕಾರಿಗಳು ರೖತರ ನೆರವಿಗೆ ಬರುತ್ತಾರೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಕಳೆದ ಕೆಲ ತಿಂಗಳಲ್ಲಿ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ 4 ಪ್ರಕರಣಗಳ ಮೇಲೆ ಎಫ್‍ಐಆರ್ ದಾಖಲಾಗಿದೆ. ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ಸಾಲದಾತರು ನೀಡಿದ ಸಾಲವನ್ನು ಮರುಪಾವತಿ ಮಾಡದಿರುವುದೇ ಈ ಆತ್ಮಹತ್ಯೆ ಪ್ರಕರಣಗಳಿಗೆ ಪ್ರಮುಖ ಕಾರಣವಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ. ತುಮಕೂರು ನಗರದಲ್ಲಿ ಮೀಟರ್ ಬಡ್ಡಿ ದಂಧೆ ಸೇರಿದಂತೆ ತಿಪಟೂರು, ಕೆ.ಬಿ. ಕ್ರಾಸ್, ಚಿಕ್ಕನಾಯಕನಹಳ್ಳಿಯಲ್ಲಿ ಫೈನಾನ್ಸ್ ಕಂಪನಿಗಳು ನೀಡಿರುವ ಸಾಲ ವಸೂಲಾತಿ ಮಾಡಲು ಸಾಲಗಾರರೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳುತ್ತಿರುವ ಬಗ್ಗೆ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರಲ್ಲದೆ ಸಾಲ ಮಾಡಿ ತೀರಿಸಲಾಗದವರಿಗೆ ಮನೋಸ್ಥೈರ್ಯ ತುಂಬುವ ಕೆಲಸವಾಗಬೇಕು.

    ಸಾಲದಿಂದ ಮುಕ್ತಿ ಹೊಂದಲು ಆತ್ಮಹತ್ಯೆಯೊಂದೇ ಮಾರ್ಗವಲ್ಲ ಎಂಬ ಬಗ್ಗೆ ಗ್ರಾಮೀಣ ಪ್ರದೇಶದ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್

    March 8, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.