ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್ ಡಿ ಕೆ ಕಣಕ್ಕಿಳಿದಿದ್ದು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಮಗನನ್ನೇ ಗೆಲ್ಲಿಸಲಾಗದವರು ತಾವು ಗೆಲ್ಲುವರೇ ಎಂಬ ಪ್ರಶ್ನೆ ಇಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಯಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಎಷ್ಟೇ ಭಾವನಾತ್ಮಕವಾಗಿ ಮಾತನಾಡಿದರೂ ಮಂಡ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ. ಹಾಸನದವರಾದ ಅವರಿಗೆ ಮಂಡ್ಯ ಹೇಗೆ ಕರ್ಮಭೂಮಿಯಾದಿತು ಎಂದು ಪ್ರಶ್ನಿಸಿದರು.
ಇನ್ನು ಹೆಚ್ ಡಿಕೆ ಎದುರು ಕಾಂಗ್ರೆಸ್ ಅಭ್ಯರ್ಥಿ ವೀಕ್ ಆದರೆ? ಎಂಬ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು ಸ್ಟಾರ್ ಚಂದ್ರು ವೀಕ್ ಕ್ಯಾಂಡಿಡೇಟ್ ಅಲ್ಲ, ಮಂಡ್ಯ ಕ್ಷೇತ್ರಕ್ಕೆ ಅಪರಿಚಿತರೂ ಅಲ್ಲ ನಾಗಮಂಗಲದವರು, ಯಾವ ರೀತಿಯಲ್ಲೂ ದುರ್ಬಲ ಅಭ್ಯರ್ಥಿ ಅಲ್ಲ ಎಂದರು. ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಲೇ ಅವರಿಗೆ ತಮ್ಮ ಮಗನನ್ನ ಗೆಲ್ಲಿಸಲು ಆಗಲಿಲ್ಲ ಈಗ ಅವರು ಗೆಲ್ಲುತ್ತಾರೆಯೇ ಎಂದು ಸಿಎಂ ವ್ಯಂಗ್ಯವಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296