ಬೆಂಗಳೂರು: ಬಿಜೆಪಿ ಪಕ್ಷದ ಹಲವು ನಾಯಕರ ಮೇಲೆ ಪ್ರಕರಣಗಳಿವೆ, ಅವರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಅವರ ಟೀಕೆಗಳಿಗೆ ಉತ್ತರಿಸುವ ಅಗತ್ಯವೇ ಇಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಅವರು, ರಾಜಕೀಯ ದ್ವೇಷಕ್ಕಾಗಿ 12 ವರ್ಷಗಳ ಪ್ರಕರಣವನ್ನು ಮುನ್ನೆಲೆಗೆ ತಂದು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರಜಾಪ್ರಭುತ್ವದ ಮಾರ್ಗದಲ್ಲಿ 136 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್ ಅನ್ನು ನೋಡಿ ಬಿಜೆಪಿಯಿಂದ ಸಹಿಸಲಾಗುತ್ತಿಲ್ಲ. ಅವರು ಎಂದೂ ನೇರವಾಗಿ ಚುನಾಯಿತರಾಗಿ ಸರ್ಕಾರ ರಚಿಸಿಲ್ಲ. ವಾಮಮಾರ್ಗದ ಮೂಲಕವೇ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಜಾಪ್ರಭುತ್ವದ ಅರ್ಥವೇ ಗೊತ್ತಿಲ್ಲದ ಬಿಜೆಪಿಗೆ ಉತ್ತರ ನೀಡುವ ಅಗತ್ಯವಿಲ್ಲ ಎಂದರು.
12 ವರ್ಷಗಳಲ್ಲಿ ಯಡಿಯೂರಪ್ಪನವರು ಸೇರಿದಂತೆ ಹಲವರು ಮುಖ್ಯಮಂತ್ರಿಯಾಗಿದ್ದರು. ಆಗೆಲ್ಲಾ ಮುಡಾ ಹಗರಣಗಳ ಬಗ್ಗೆ ಏಕೆ ಮಾತನಾಡಲಿಲ್ಲ. ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಗೆ ಬಂದ ಮೇಲೆ ಬಿಜೆಪಿಯವರು ಮತ್ತೆ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಇಂತವರು ಕಾಂಗ್ರೆಸ್ ಪಕ್ಷದ ಬಗ್ಗೆ ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q