ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೂ ಆಭ್ಯಂತರವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ದಸರಾ ಮಹೋತ್ಸವ ವೀಕ್ಷಣೆಗೆ ಮೈಸೂರಿಗೆ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ . ಹಾಗಾಗಿ ಹುದ್ದೆಗಾಗಿ ರೇಸ್ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದರು.
ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ವಿರೋಧ ಪಕ್ಷಗಳು ಅಭಿಮಾನ ತೋರಿಸುತ್ತಿರುವುದಕ್ಕೆ ಧನ್ಯವಾದಗಳು ಎಂದು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ನಾವೆಲ್ಲ ಅವರ ಬೆಂಬಲಕ್ಕೆ ಇದ್ದೇವೆ. ಐದು ವರ್ಷ ಕಾಲವು ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಮುಂದುವರೆಯುತ್ತಾರೋ ಅಥವಾ ಮೂರು ವರ್ಷ ಮಾತ್ರ ಇರುತ್ತಾರೋ ಎಂಬುದನ್ನು ಹೈಕಮಾಂಡ್ ಹೇಳಬೇಕು. ಅದರ ಬಗ್ಗೆ ಹೇಳಿಕೆ ನೀಡುವ ಸಾಮರ್ಥ್ಯ ತಮಗಿಲ್ಲ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೂ ತಮಗೇನೂ ಆಭ್ಯಂತರವಿಲ್ಲ. ಈ ನಿಟ್ಟಿನಲ್ಲಿ ಹೈಕಮಾಂಡ್ ತಮ್ಮೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ. ಮುಂದಿನ ಯಾವುದೇ ನಿರ್ಧಾರಗಳಾದರೂ ಪಕ್ಷದ ವರಿಷ್ಠರೇ ತೆಗೆದುಕೊಳ್ಳಬೇಕು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


