ತುಮಕೂರು : ಕೇಂದ್ರದ ವರಿಷ್ಠರು ಯಾವ ರೀತಿ ಒಪ್ಪಿಗೆ ಸೂಚಿಸುತ್ತಾರೆ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಮಾಜಿ ಸಚಿವ ವಿ ಸೋಮಣ್ಣ ಅವರು ಹಿರಿಯರಿದ್ದಾರೆ. ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಹಿಂಗಿತ ವ್ಯಕ್ತಪಡಿಸಿದ್ದಾರೆ ಇದಕ್ಕೆ ಯಾರ ಅಭ್ಯಂತರವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವಿಜೆಂದ್ರ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪಕ್ಷದ ಹೈಕಮಾಂಡ್ ಹಾಗೂ ಹಿರಿಯರು ಕುಳಿತು ಚರ್ಚೆ ನಡೆಸಿ ಈ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಹೇಳಿದರು.
ರಾಜ್ಯದ ಯಾವ ಲೋಕಸಭಾ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಆಗಬೇಕೆಂಬ ನಿರ್ಧಾರವನ್ನು ಕೇಂದ್ರದ ವರಿಷ್ಠರು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಮೈತ್ರಿಯ ಹಿನ್ನೆಲೆಯಲ್ಲಿ ಟಿಕೆಟ್ ಹಂಚಿಕೆಯ ಕುರಿತಂತೆ ಸದ್ಯದಲ್ಲಿಯೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಅನೇಕ ಮಹಿಳಾಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆಗಳು ಪ್ರತಿಯೊಬ್ಬ ಮಹಿಳೆಯರು ತಲುಪಬೇಕು ಎಂಬ ಉದ್ದೇಶದಿಂದ ಅಭಿಯಾನವನ್ನು ಬಿಜೆಪಿ ಪಕ್ಷದ ವತಿಯಿಂದ ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಅಭಿಯಾನದ ಒಂದು ಭಾಗವಾಗಿ ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧಡೆಯಿಂದ ಮಹಿಳೆಯರು ಇದರಲ್ಲಿ ಇಂದು ಭಾಗವಹಿಸಿದ್ದಾರೆ ಎಂದು ತಿಳಿಸಿದರು.


