ಕೆಲವು ಸಂದರ್ಭಗಳಲ್ಲಿ ಸಿಗ್ನಲ್ ಜಂಪ್ ಮಾಡಿ ಅದಕ್ಕೆ ದಂಡ ಪಾವತಿಸುವಂತೆ ಚಲನ್ ಬಂದರೆ ಏನು ಮಾಡಬೇಕು ಎಂದೂ ಬೆಂಗಳೂರು ಸಂಚಾರಿ ಪೊಲೀಸರೇ ಸಲಹೆ ನೀಡಿದ್ದಾರೆ.
ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಟ್ರಾಫಿಕ್ ಪೊಲೀಸರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಹೊರಡಿಸಿದ ಚಲನ್‌ಗಳನ್ನು ಈಗ ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.
ಈ ವಿಚಾರವಾಗಿ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಎಂಎನ್ ಅನುಚೇತ್ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್‌ಗೆ ದಾರಿ ಮಾಡುವಾಗ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಕ್ಯಾಮರಾಗಳ ದೃಶ್ಯ ಆಧರಿಸಿ ದಂಡ ವಿಧಿಸಿದ ಉದಾಹರಣೆಗಳಿವೆ. ಇದಕ್ಕೆ ಭಯಪಡಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ. ಏನು ಮಾಡಬೇಕು ಎಂದೂ ತಿಳಿಸಿದ್ದಾರೆ.
ಸಿಗ್ನಲ್ ಜಂಪ್ಗಾಗಿ ಚಲನ್‌ಗಳನ್ನು ಪಡೆದ ಪ್ರಯಾಣಿಕರು ಇನ್‌ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರದ ಕಚೇರಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯ ಗಮನಕ್ಕೆ ತರಬಹುದು ಎಂದು ಎಂಎನ್ ಅನುಚೇತ್ ತಿಳಿಸಿದ್ದಾರೆ. ಅಥವಾ ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ ಪಿ) ಅಪ್ಲಿಕೇಶನ್ ಮೂಲಕ ಮನವಿ ಮಾಡಬಹುದು ಎಂದೂ ತಿಳಿಸಿದ್ದಾರೆ.
ಕ್ಯಾಮರಾ ಹೊಂದಿರುವ ಪ್ರತಿ ಸಿಗ್ನಲ್‌ನಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಐದು ಸೆಕೆಂಡುಗಳ ಕಾಲ ಚಟುವಟಿಕೆಗಳು ರೆಕಾರ್ಡ್ ಆಗುತ್ತವೆ. ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವುದಕ್ಕಾಗಿ ನಿಯಮ ಉಲ್ಲಂಘಿಸಿದ್ದು ಕಂಡುಬಂದಲ್ಲಿ ತಕ್ಷಣವೇ ವಾಹನ ಸವಾರರ ಮೇಲಿನ ದಂಡ ರದ್ದುಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


