ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಸಂಬಂಧ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದೆ. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವೇ ಇಲ್ಲ ಎಂದು ಅವರು ಹೇಳಿದರು.
ನನ್ನನ್ನು ಹೇಗೆ ಪಿತೂರಿ ಮಾಡಿ ಜೈಲಿಗೆ ಕಳುಹಿಸಲಾಗಿತ್ತು. ಅದೇ ಷಡ್ಯಂತ್ರವನ್ನು ಬಿಜೆಪಿಯವರು ಸಿದ್ದರಾಮಯ್ಯ ವಿರುದ್ಧ ಮಾಡಿದ್ದಾರೆ. ತಪ್ಪು ಮಾಡದ ಸಿದ್ದರಾಮಯ್ಯ ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q