ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿ ಟಿ ರವಿಯವರು ಮಾತನಾಡಿದ್ದು ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.
ಸದನದಲ್ಲಿ ಪ್ರಶ್ನೋತ್ತರ ವೇಳೆ ಮುಗಿದ ಬಳಿಕ, ಕಾಂಗ್ರೆಸ್ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ಆಯ್ತು, ಗಲಾಟೆ ಹಿನ್ನೆಲೆ ಕಲಾಪ ಮುಂದೂಡಿದ್ವಿ. ಅವಾಗ ಇದೆಲ್ಲ ಗಲಾಟೆ ಆಗಿದೆ. ಸಂಜೆ 6 ಗಂಟೆಗೆ ಸಿಟಿ ರವಿ ಬಂಧನವಾಗಿರುವ ಬಗ್ಗೆ ಮಾಹಿತಿ ಬಂತು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx