ಮೈಸೂರು: 6 ತಿಂಗಳಿಂದ ಸಂಬಳ ನೀಡದ ಹಿನ್ನೆಲೆಯಲ್ಲಿ ಉದ್ಯೋಗಿಯೊಬ್ಬ ಸರ್ಕಾರಿ ಕಚೇರಿಯ ಕೊಠಡಿಯಲ್ಲಿನ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನಡೆದಿದೆ.
ಹೊರ ಗುತ್ತಿಗೆ ನೌಕರ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ ಉದ್ಯೋಗಿ. ಕಳೆದ 6 ತಿಂಗಳಿಂದ ಸಂಬಳ ನೀಡದ್ದಕ್ಕೆ ಬೇಸರಗೊಂಡಿದ್ದ ಉದ್ಯೋಗಿ ದೀಪಕ್ ಕೆಲಸಕ್ಕೆ ಬಂದ ವೇಳೆ ಉಪ ನಿರ್ದೇಶಕರನ್ನು ಪ್ರಶ್ನೆ ಮಾಡಿದ್ದಾನೆ. ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕಚೇರಿಯಲ್ಲೇ ನೇಣಿಗೆ ಶರಣಾಗಲು ಯತ್ನಿಸಿ ಟವೆಲ್ ನಿಂದ ಫ್ಯಾನ್ಗೆ ಬಿಗಿದುಕೊಳ್ಳಲು ಮುಂದಾಗಿದ್ದಾನೆ.
ತಕ್ಷಣ ದೀಪಕ್ನನ್ನು ಸಹ ಸಿಬ್ಬಂದಿ ತಡೆದು ವಾಪಸ್ ಕಳುಹಿಸಿದ್ದಾರೆ. ಇದೇ ವಿಚಾರಕ್ಕೆ ನಾಲ್ಕು ತಿಂಗಳ ಹಿಂದೆ ದೀಪಕ್ ಕೈ ಕೊಯ್ದುಕೊಂಡಿದ್ದ. ಘಟನೆ ನಂತರ ಈ ದಿನವೇ ಸಂಬಳ ಹಾಕಲಾಗುತ್ತೆ ಎಂದು ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಹೇಳಿದ್ದಾರೆ.
ಆತ ಹೊರ ಗುತ್ತಿಗೆ ನೌಕರ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಮನೆಯ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾರೆ. ಇನ್ನು ಅರ್ಧ ಗಂಟೆಯಲ್ಲಿ ಸಂಬಳ ಹಾಕುತ್ತೇವೆ. ನಮ್ಮಲ್ಲಿ ಒಟ್ಟು 16 ಜನ ಹೊರ ಗುತ್ತಿಗೆ ನೌಕರರಿದ್ದಾರೆ. ಎಲ್ಲರಿಗೂ ಏಜೆನ್ಸಿ ಮೂಲಕವೇ ಸಂಬಳ ಆಗುತ್ತೆ. ಅದಕ್ಕು ನಮಗೂ ಸಂಬಂಧ ಇಲ್ಲ ಎಂದ ಸಹಾಯಕ ನಿರ್ದೇಶಕ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW