ಬೆಂಗಳೂರು: ಗೃಹ ಸಚಿವ ಡಾ. ಪರಮೇಶ್ವರ್ ಅವರು ಹೊಸವರ್ಷಾಚರಣೆ ಸಂಬಂಧ ವಿಧಾನಸೌಧದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಹೊಸ ವರ್ಷಾಚರಣೆ ವೇಳೆ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ. ಹಾಗೂ ಕೊರೊನಾ ಹೆಚ್ಚಾಗುತ್ತಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.
ಗೃಹ ಸಚಿವ ಡಾ.ಪರಮೇಶ್ವರ್ ಅವರು ಇಂದು ವಿಧಾನಸೌಧದಲ್ಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವಾರು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನಲ್ಲಿ MG ರೋಡ್, ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಜನ ಸೇರಿ ಹೊಸ ವರ್ಷವನ್ನು ಆಚರಣೆ ಮಾಡುತ್ತಾರೆ. ಅನೇಕ ಸಂದರ್ಭಗಳಲ್ಲಿ ಕೆಲವು ಅಹಿತಕರ ಘಟನೆಗಳು ಸಹ ನಡೆದಿದೆ. ಪೊಲೀಸ್ ಇಲಾಖೆ, ಮತ್ತು ಅಬಕಾರಿ ಇಲಾಖೆ, ಮೆಟ್ರೋ, ಕೆಎಸ್ಆರ್ಟಿಸಿ ಎಲ್ಲರನ್ನೂ ಕರೆದು ಸಭೆ ಮಾಡಿದ್ದೇನೆ. ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯಬಾರದು.
ಅದರ ಜೊತೆಗೂ ಕೋವಿಡ್ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಬಗ್ಗೆ ಸಭೆ ಕರೆದಿದ್ದೆವು. ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಎಜೆನ್ಸಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.


