ಚಾಮರಾಜನಗರ: ಹೆಸರು ಕೆಡಿಸಿಕೊಂಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೊಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆಂದು ಬಿಜೆಪಿಯವರು ಅಭ್ಯರ್ಥಿ ಬದಲಾವಣೆ ಮಾಡುತ್ತಿರಬಹುದು ನನಗೆ ಗೊತ್ತಿಲ್ಲ ಎಂದರು.
ತಾನು ಎಂಪಿಯಾದರೆ ಸಿಎಂ ಕುರ್ಚಿ ಅಲುಗಾಡಲಿದೆ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎರಡು ಸಾರಿ ಎಂಪಿ ಆಗಿದ್ದಾರಲ್ಲ, ನನ್ನ ಕುರ್ಚಿ ಅಲುಗಾಡಲೇ ಇಲ್ಲಾ, ಕ್ಯಾಂಡಿಡೇಟ್ ಯಾರದಾರೂ ಆಗಲಿ ನಾವು ಈ ಬಾರಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


