ಬೆಂಗಳೂರು: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ. ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ ಎಂದು ತಿಳಿಸಿದರು.
ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು.
ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದ್ದು, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಹಿತಕಾಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC