ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ರಾಜ್ಯದ ಜನ ಬಲಿಯಾಗುತ್ತಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಗೆದ್ದ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗಬೇಕು ಎಂದರೆ ಸುರ್ಜೆವಾಲ ಹತ್ತಿರ ಹೋಗುವ ಸ್ಥಿತಿ ಉದ್ಭವವಾಗಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯನವರು ಸಿಎಂ ಅಂತ ಇಲ್ಲಿಯವರೆಗೆ ನಾವು ಅಂದುಕೊಂಡಿದ್ದೆವು. ಆದರೆ ಸೂಪರ್ ಸಿಎಂ ಬಗ್ಗೆ ಜನ ಚರ್ಚೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಗೆದ್ದ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗಬೇಕೆಂದರೆ ಸುರ್ಜೆವಾಲರ ಹತ್ತಿರ ಹೋಗುವ ಸ್ಥಿತಿ ಉದ್ಭವವಾಗಿದೆ ಎಂದರು.
ಹೀಗಾಗಿಯೇ ರಾಜ್ಯ ಸರ್ಕಾರ ಯಾರಿಗೆ ಸಿಎಂ ಸ್ಥಾನ ಕೊಟ್ಟಿದೆ ಎಂದು ಜನ ಚರ್ಚೆ ಮಾಡುತ್ತಿದ್ದಾರೆ. ಅದರ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC