ತುಮಕೂರು: ದೇಶದ ಪಹಲ್ಗಾಮ್ ಸೇರಿದಂತೆ ವಿವಿಧಡೆ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಪ್ರಧಾನಿ ಮೋದಿಯವರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ, ಅದರಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಭಾರತದಿಂದ ಹೊರ ಹೋಗುವಂತೆ ಸೂಚನೆ ನೀಡಿದ್ದರೂ ಕೂಡ ದೇಶದಲ್ಲಿ ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಿಂದ ಪಾಕಿಸ್ತಾನಿ ಪ್ರಜೆಗಳನ್ನು ಪಾಕಿಸ್ತಾನಕ್ಕೆ ವಾಪಸ್ ಕಳುಹಿಸುತ್ತಿಲ್ಲ ಎಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಆರೋಪಿಸಿದರು.
ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನಿ ಪ್ರಜೆಗಳನ್ನು ಕಿಕ್ ಔಟ್ ಮಾಡುವಂತೆ ಕರ್ನಾಟಕ ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುವ ದೃಷ್ಟಿಯಿಂದ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು.
ತುಮಕೂರು ನಗರದಲ್ಲಿಯೂ ಮೂವರು ಪಾಕಿಸ್ತಾನಿ ಪ್ರಜೆಗಳಿದ್ದು ರಾಷ್ಟ್ರ ವಿರೋಧಿಗಳನ್ನು ಪಾಕಿಸ್ತಾನಕ್ಕೆ ದೇಶದಿಂದ ಕಿಕ್ ಔಟ್ ಮಾಡಲು ರಾಜ್ಯಪಾಲರ ಗಮನಕ್ಕೂ ತರುವುದಾಗಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————