nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ: ಗೃಹ ಸಚಿವ ಪರಮೇಶ್ವರ್ ಆಕ್ರೋಶ
    ತುಮಕೂರು November 12, 2024

    ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ: ಗೃಹ ಸಚಿವ ಪರಮೇಶ್ವರ್ ಆಕ್ರೋಶ

    By adminNovember 12, 2024No Comments2 Mins Read
    parameshwar

    ತುಮಕೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಕೊರಟಗೆರೆ ತಾಲ್ಲೂಕು ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವುದು ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಕಚೇರಿಯಲ್ಲಿ ಕುಳಿತು ಪತ್ರಗಳಿಗೆ ಸಹಿ ಹಾಕಲಷ್ಟೇ ತಮ್ಮ ಕರ್ತವ್ಯಗಳನ್ನು ಸೀಮಿತಗೊಳಿಸದೆ ಶಾಲಾ-ಕಾಲೇಜು, ಆಸ್ಪತ್ರೆ, ವಿದ್ಯಾರ್ಥಿ ನಿಲಯಗಳಿಗೆ ತಿಂಗಳಿಗೊಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು. ಅವ್ಯವಸ್ಥೆಗಳು ಕಂಡು ಬಂದರೆ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮಾತಿನ ಚಾಟಿ ಬೀಸಿದರು.


    Provided by
    Provided by

    ವಿದ್ಯಾರ್ಥಿ ನಿಲಯಗಳಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳೇ ಇಲ್ಲ. ವಿದ್ಯಾರ್ಥಿನಿಯರು ವ್ಯಾಸಂಗ ಮಾಡುವ ಸ್ಥಳದಲ್ಲಿ ಇಂತಹ ಅವ್ಯವಸ್ಥೆಗಳನ್ನು ನಾನು ಸಹಿಸುವುದಿಲ್ಲ. ಕೂಡಲೇ ವಸತಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯಗಳ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಅಸಡ್ಡೆ ತೋರಿದ ಅಧಿಕಾರಿಗಳು ಅಮಾನತ್ತಿನ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಡಿಸೆಂಬರ್ 2ರಂದು ಸಿಎಂ ಭೇಟಿ :

    ಇದಕ್ಕೂ ಮುನ್ನ ಜಿಲ್ಲೆಗೆ ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಲು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಕ್ರಮಕೈಗೊಳ್ಳಬೇಕು. ಕಳೆದ ಅಕ್ಟೋಬರ್‌ನಲ್ಲಿ ಜರುಗಿದ ದಸರಾ ಉತ್ಸವವನ್ನು ಯಶಸ್ವಿಗೊಳಿಸಿದಂತೆ ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನೂ ಸಹ ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಮುಖ್ಯ ಮಂತ್ರಿಗಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಕಾರ್ಮಿಕ ಸೇರಿದಂತೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಲು ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದರಲ್ಲದೆ, ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಪ್ರತಿಯೊಂದು ಇಲಾಖೆಗೂ ಕೋಟ್ಯಾಂತರ ರೂ.ಗಳ ಅನುದಾನವನ್ನು ಒದಗಿಸಿದ್ದರೂ ಸೌಲಭ್ಯಗಳು ನಿರೀಕ್ಷಿತ ಮಟ್ಟದಲ್ಲಿ ಫಲಾನುಭವಿಗಳನ್ನು ತಲುಪುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

    ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಸವಲತ್ತುಗಳನ್ನು ಸಕಾಲಕ್ಕೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಹಾಗೂ ಕರ್ತವ್ಯ. ಆಯವ್ಯಯದನ್ವಯ ಮೀಸಲಿಟ್ಟ ಹಣವನ್ನು ನಿರ್ಧಿಷ್ಟ ಯೋಜನೆಗಳಿಗೆ ವೆಚ್ಚ ಮಾಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

    ಕಳೆದ ಬಾರಿ ನಗರದಲ್ಲಿ ಜರುಗಿದ ಮುಖ್ಯಮಂತ್ರಿಗಳ ಕಾರ್ಯಕ್ರಮದ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೇರೆ ಜಿಲ್ಲೆಗಳಲ್ಲಿ ತುಮಕೂರು ಕಾರ್ಯಕ್ರಮವನ್ನು ಉದಾಹರಿಸಿ ಪ್ರಸ್ತಾಪಿಸಿದ್ದಾರೆ. ಈ ಬಾರಿಯೂ ಕಳೆದ ಬಾರಿಯಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಬೇಕೆಂದರು.

    ರೈತರಿಗೆ ವಿತರಿಸಲಾಗುವ ಕೃಷಿ ಪರಿಕರಗಳು ಕೃಷಿ ಚಟುವಟಿಕೆಗಳಿಗೆ ಉಪಯೋಗವಾಗುವಂತೆ, ಸ್ವಯಂ ಉದ್ಯೋಗ ಕೈಗೊಳ್ಳಲು ನಿಗಮಗಳಿಂದ ನೀಡಲಾಗುವ ಸಾಲ-ಸೌಲಭ್ಯಗಳು ದುರುಪಯೋಗವಾಗದಂತೆ ನಿಗಾವಹಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಸರ್ಕಾರಿ ಯೋಜನೆಗಳು ಸಮರ್ಪಕವಾಗಿ ಅನುಷ್ಟಾನವಾದಾಗ ಮಾತ್ರ ಸರ್ಕಾರದ ಧ್ಯೆಯೋದ್ದೇಶಗಳು ಸಾರ್ಥಕವಾಗುತ್ತವೆ. ಆಯಾ ಆರ್ಥಿಕ ವರ್ಷದಲ್ಲಿ ಬಿಡುಗಡೆಯಾದ ಅನುದಾನವನ್ನು ನಿಗದಿತ ಸಮಯದಲ್ಲಿ ಖರ್ಚು ಮಾಡದೆ ವರ್ಷಾಂತ್ಯದಲ್ಲಿ ತರಾತುರಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಅಭ್ಯಾಸವನ್ನು ಅಧಿಕಾರಿಗಳು ಕೈಬಿಡಬೇಕೆಂದು ಸೂಚಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ

    June 3, 2026

    ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.