ತುಮಕೂರು: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಬಾಕಿಯಿರುವ ಇ–ಆಫೀಸ್, ಸಕಾಲ, 1–5 ದರಖಾಸ್ತು, ಪೋಡಿ, ಕಡತ ವಿಲೇವಾರಿ, ಬಗರ್ ಹುಕುಂ, ಭೂಮಿ ತಂತ್ರಾಂಶಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ವಿಷಯಗಳ ಬಗ್ಗೆ ಇತ್ತೀಚೆಗೆ ಸಭೆ ನಡೆಸಿ ಕಂದಾಯ ಪ್ರಗತಿ ಪರಿಶೀಲಿಸಿ ಈ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಎಲ್ಲಾ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಕಂದಾಯ ಸಿಬ್ಬಂದಿ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4