ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.
ಹೈದರಾಬಾದ್ ಗೆ ಶನಿವಾರ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ, ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದರು.
ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಇದು ಕಾಂಗ್ರೆಸ್ ನ ಶಾಸಕರಿಗೆ ಕೊನೆಯ ಖಡಕ್ ಎಚ್ಚರಿಕೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆಶಿ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಬಂದು ಯಾವುದೇ ಹೇಳಿಕೆಗಳನ್ನು ನೀಡಬಾರದು. ಇದು ಅವರಿಗೆ ಕಡೆಯ ಎಚ್ಚರಿಕೆ ಎಂದು ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಮಾಧ್ಯಮಗಳ ಮುಂದೆ ಬರಬಾರದು. ಹೇಳಿಕೆಗಳನ್ನು ನೀಡಬಾರದು. ಈಗಾಗಲೇ ಪಕ್ಷದ ವತಿಯಿಂದ ಇದಕ್ಕೆ ಬೇಕಾದ ಸೂಚನೆ ನೀಡಿದ್ದು, ಇದು ಮುಂದುವರೆದ್ರೆ, ಕ್ರಮ ನಿಶ್ಚಿತ ಎಂದಿದ್ದಾರೆ.


