nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    • ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ
    • ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ
    • ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ
    • ಕಾರ್ಮಿಕ ಚಳುವಳಿಗಳು ಮತ್ತೆ ಪುಟ್ಟಿದೇಳಬೇಕಿದೆ: ಕಾರ್ಮಿಕ ದಿನಾಚರಣೆಯಲ್ಲಿ ಎಲ್. ಹನುಮಂತಯ್ಯ ಕರೆ
    • ಅಂಬೇಡ್ಕರ್ ಸ್ಮರಣೆ: ಪುಸ್ತಕ ವಿತರಣೆ ಕಾರ್ಯಕ್ರಮ
    • ಬಸವ ತತ್ವಗಳಿಂದ ಸಾಮಾಜಿಕ ಪಿಡುಗನ್ನು ತೊಲಗಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ
    • ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಥಗಿತವಾಗಿರುವ ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಪುನರಾರಂಭಕ್ಕೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
    ರಾಜ್ಯ ಸುದ್ದಿ October 8, 2023

    ಸ್ಥಗಿತವಾಗಿರುವ ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಪುನರಾರಂಭಕ್ಕೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

    By adminOctober 8, 2023No Comments2 Mins Read
    dk shivakumar

    ಬೆಂಗಳೂರು:“ಇಲಾಖೆಗಳಿಂದ ಅನುಮತಿ ಪಡೆದು ಸ್ಥಗಿತವಾಗಿರುವ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳನ್ನು ಪುನರಾರಂಭಿಸಲು ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

    ವಸಂತನಗರದ ಅಯ್ಯಪ್ಪ ಸ್ವಾಮಿ ದೇವಾಸ್ಥಾನದ ಪಕ್ಕ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿಗಳು ನಂತರ ಜಯಮಹಲ್ ಪ್ಯಾಲೇಸ್ ರಸ್ತೆಯ ಅಗಲೀಕರಣ ಹಾಗೂ ಅಂಡರ್ ಗ್ರೌಂಡ್ ಕೇಬಲ್ ಅಳವಡಿಕೆ ಕಾಮಗಾರಿಯನ್ನು ಪರಿಶೀಲಿಸಿದರು.


    Provided by
    Provided by

    ಆದಷ್ಟು ಬೇಗ ಈ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ಬಿಡಿಎ ಮುಖ್ಯಸ್ಥರಾದ ರಾಕೇಶ್ ಸಿಂಗ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಇದ್ದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು:

    “ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಟೆಂಡರ್ ಶ್ಯೂರ್ ಕಾಮಗಾರಿ ನಡೆದಿವೆ. ಟೆಂಡರ್ ಶ್ಯೂರ್ ರಸ್ತೆಯಲ್ಲಿ ಮುಂದೆ ಯಾರೂ ಕೂಡ ರಸ್ತೆಯನ್ನು ಅಗೆಯಬಾರದು, ಕೇಬಲ್ ಲೈನ್ ಎಳೆದುಕೊಂಡು ಹೋಗಲು ಅವಕಾಶ ಮಾಡಿಕೊಡಲಾಗಿದೆ. ಅವುಗಳನ್ನು ಯಾರೂ ಉಪಯೋಗಿಸುತ್ತಿಲ್ಲ. ನಾವು ಎಲ್ಲೆಲ್ಲಿ ಈ ವ್ಯವಸ್ಥೆ ಕಲ್ಪಿಸಿದ್ದೇವೆ, ಅಲ್ಲೆಲ್ಲಾ ಇದರ ಕಾನೂನುಬದ್ಧವಾಗಿ ಉಪಯೋಗ ಮಾಡಿಕೊಳ್ಳಬೇಕು. ಬೆಂಗಳೂರಿನ ಅಂದ ಹೆಚ್ಚಿಸಲು ಕೇಬಲ್ ಗಳನ್ನು ಅಂಡರ್ ಗ್ರೌಂಡ್ನಲ್ಲಿ ತೆಗೆದುಕೊಂಡು ಹೋಗಬೇಕು.

    ಬೆಂಗಳೂರಿನಲ್ಲಿ ಬೀಳುವ ಮಳೆ ನೀರು ರಸ್ತೆಯ ಮೇಲೆ ನಿಲ್ಲಬಾರದು, ಒಳಚರಂಡಿ ಮೂಲಕ ಹರಿದುಹೋಗಬೇಕು ಅದಕ್ಕಾಗಿ ನಾವು ಈಗಾಗಲೇ ಅನುಮತಿ ನೀಡಲಾಗಿರುವ ಕಾಮಗಾರಗಳನ್ನು ಪುನರಾರಂಭಿಸಲು ಸೂಚಿಸಿದ್ದೇನೆ. ಇನ್ನು ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಸಾರ್ವಜನಿಕರು ಅಧಿಕಾರಿಗಳಿಗೆ ಮಾಹಿತಿ ನೀಡಬಹುದು. ಕೂಡಲೇ ಅವುಗಳನ್ನು ಸರಿಪಡಿಸಲಾಗುವುದು. ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಲು ಚರ್ಚೆ ಮಾಡಿದ್ದೇವೆ. ಪೊಲೀಸ್ ಇಲಾಖೆ ಹಾಗೂ ಪಾಲಿಕೆ ಸೇರಿ ರಸ್ತೆಗುಂಡಿಗಳನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಆದ್ಯತೆ ಮೇರೆಗೆ ಈ ಕೆಲಸ ಮಾಡಬೇಕಾಗಿದೆ. ಈ ಮಧ್ಯೆ ಇದೇ ತಿಂಗಳು 7ರಂದು ಹೊರವರ್ತುಲ ರಸ್ತೆಗೆ ಭೇಟಿ ನೀಡಿ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಚರ್ಚೆ ಮಾಡಲಾಗುವುದು.

    ಬಿಬಿಎಂಪಿ ಬಿಲ್ ಬಾಕಿ ವಿಚಾರವಾಗಿ, ಅಮೃತನಗರ ಯೋಜನೆಯಲ್ಲಿ ಐದು ಸಾವಿರ ಕೋಟಿ ವೆಚ್ಚದ 352 ಪ್ಯಾಕೇಜ್ ಕಾಮಗಾರಿಗಳ ಪೂರ್ಣಗೊಳಿಸಲು ತಿಳಿಸಲಾಗಿದೆ. ಇನ್ನು ಕಾಮಗಾರಿಗಳ ತನಿಖೆ ಕೂಡ ಮುಂದುವರಿದು ವರದಿ ಸಲ್ಲಿಕೆಯಾಗಲಿದೆ. 675 ಕೋಟಿ ಮೊತ್ತದ ಬಿಲ್ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಸುಮಾರು 50-75% ನಷ್ಟು ಬಿಲ್ ಪಾವತಿ ಮಾಡಲಾಗಿದೆ. 432 ಕೋಟಿ ಬಿಬಿಎಂಪಿ ಅನುದಾನ ಕೂಡ ಬಿಡುಗಡೆ ಮಾಡಲಾಗುವುದು. ಉಳಿದ ಬಾಕಿ ಮೊತ್ತವನ್ನು ಪಾವತಿ ಮಾಡಲಾಗುವುದು. ಜನರಿಗೆ ತೊಂದರೆ ಆಗದಂತೆ ಕೆಲಸ ಆರಂಭಿಸಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವ ಜವಾಬ್ದಾರಿ ಇಂಜಿನಿಯರ್ ಗಳಿಗೆ ವಹಿಸಲಾಗಿದೆ” ಎಂದು ತಿಳಿಸಿದರು.

    ಎಸ್ಐಟಿ ತನಿಖೆ ಎಲ್ಲಿಯವರೆಗೂ ಬಂದಿದೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ತನಿಖೆ ನಡೆಯುತ್ತಿದೆ. ಪೂರ್ಣಗೊಂಡ ನಂತರ ಅದರ ವರದಿ ಸಲ್ಲಿಕೆಯಾಗಲಿದೆ. ಅದಕ್ಕಾಗಿ ನಾವು ಸ್ವಲ್ಪ ಪ್ರಮಾಣದ ಬಿಲ್ ಗಳನ್ನು ಪಾವತಿ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಜೀವನದ ಸತ್ಯವನ್ನು ಅರ್ಥಪೂರ್ಣವಾಗಿ ಬಹಳ ಸರಳವಾಗಿ ತಿಳಿಸಿದ ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತವಾಗಿರುತ್ತವೆ ಎಂದು…

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026

    ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ

    May 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.