nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗನವಾಡಿಗಳಲ್ಲಿ ಖಾಲಿ ಇರುವ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ
    ರಾಜ್ಯ ಸುದ್ದಿ April 18, 2024

    ಅಂಗನವಾಡಿಗಳಲ್ಲಿ ಖಾಲಿ ಇರುವ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ

    By adminApril 18, 2024No Comments2 Mins Read
    kolara

    ಕೋಲಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಬರೋಬ್ಬರಿ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಇದು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಾಗಿದ್ದು, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 19 ಎಂದು ತಿಳಿಸಲಾಗಿದೆ.

    ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿವೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಿಯುಸಿ ತೇರ್ಗಡೆಯಾಗಿರಬೇಕು. ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಜತೆಗೆ ಡಿ.ಎಸ್‌.ಇ.ಆರ್‌.ಟಿ.ಯಿಂದ ಇ.ಸಿ.ಸಿ.ಇ. ಡಿಪ್ಲೋಮಾ ಕೋರ್ಸ್‌, ಜೆ.ಒ.ಸಿ. ಕೋರ್ಸ್‌, ಎನ್‌.ಟಿ.ಟಿ. ಕೋರ್ಸ್‌ ಮತ್ತು ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಡಿಪ್ಲೋಮಾ ನ್ಯೂಟ್ರಿಶಿಯನ್‌, ಹೋಂ ಸೈನ್ಸ್‌ ಸರ್ಟಿಫಿಕೆಟ್‌ ಕೋರ್ಸ್‌, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವವರಿಗೆ ಆದ್ಯತೆ ಲಭಿಸಲಿದೆ.


    Provided by
    Provided by

    ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶಿಕ್ಷಣ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ / ಮುಕ್ತ ವಿದ್ಯಾಲಯಗಳಲ್ಲಿ ಎಸ್ಸೆಸ್ಸೆಲ್ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಲು ಅರ್ಹರು. ಇವರು ಪ್ರಥಮ / ದ್ವಿತೀಯ ಭಾಷೆಯಾಗಿ ಕನ್ನಡ ಮತ್ತು ಸಾಮಾನ್ಯ ಗಣಿತ, ಸಮಾಜ ಶಾಸ್ತ್ರ / ಸಮಾಜ ವಿಜ್ಞಾನಗಳನ್ನು ಕಡ್ಡಾಯವಾಗಿ ಓದಿರಬೇಕು. ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ / ದ್ವಿತೀಯ ಭಾಷೆಯಾಗಿ ಓದಿದವರೂ ಅರ್ಜಿ ಸಲ್ಲಿಸಬಹುದು.

    ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು. ವಿಶೇಷ ಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ ಎನ್ನಲಾಗಿದೆ.

    ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ, ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ, ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ಅದರ ಪ್ರಮಾಣ ಪತ್ರ, ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಲು ತಿಳಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.