ಬೆಂಗಳೂರು: ಜೈಲಿನಲ್ಲಿ ನಟ ದರ್ಶನ್ ಹಾಗೂ ಕುಖ್ಯಾತ ರೌಡಿಗಳಿಗೆ ರಾಜಾತಿಥ್ಯ ನೀಡಿದ ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕಾರಾಗೃಹಗಳು ಮತ್ತು ಸುಧಾರಣಾ ಸೇವೆಗಳ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅಧಿಕಾರಿಗಳನ್ನ ತರಾಟೆಗೆತ್ತಿಕೊಂಡಿದ್ದಾರೆ.
ಇಂದು ಬೆಳಗ್ಗೆ ಜೈಲಿಗೆ ಭೇಟಿ ನೀಡಿದ ಅವರು, ನಿಮ್ಮ ಕೆಲಸಗಳಿಂದ ಹಿರಿಯ ಅಧಿಕಾರಿಗಳು ತಲೆ ತಗ್ಗಿಸುವಂತಾಗಿದೆ. ಈ ಘಟನೆಯಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆಯಲ್ಲದೆ ಬೇರೆ ಖೆೈದಿ ಅಥವಾ ವಿಚಾರಣಾ ಖೆೈದಿಗಳಿಗೆ ಈ ರೀತಿಯ ರಾಜಾತಿಥ್ಯ ನೀಡಲಾಗಿದೆಯೇ?, ಬೇರೆ ಇನ್ನೇನಾದರೂ ಸವಲತ್ತು ಒದಗಿಸಲಾಗಿದೆಯೇ?, ಒಂದು ವೇಳೆ ಆ ರೀತಿಯ ಸೌಲಭ್ಯಗಳನ್ನು ಕೊಡುತ್ತಿದ್ದರೆ ತಕ್ಷಣ ನಿಲ್ಲಿಸಿ, ಇಲ್ಲದಿದ್ದರೆ ನಿಮ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.
ಪ್ರತಿ ಸಭೆಯಲ್ಲೂ ಸಹ ನಾವು ಪದೇಪದೇ ಜೈಲಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿಗಳಿಗೆ ತಿಳಿಸಿದ್ದೇವೆ. ಆದರೂ ಸಹ ಇಂತಹ ಕೆಲಸ ಮಾಡುತ್ತೀರಿ. ಯಾರು, ಎಷ್ಟೇ ದೊಡ್ಡವರಾದರೂ ಅವರಿಗೆ ಯಾವುದೇ ರೀತಿಯ ಹೆಚ್ಚಿನ ಸವಲತ್ತು ನೀಡಬಾರದು. ಜೈಲಿನ ನಿಯಮಾವಳಿ ಪ್ರಕಾರವೇ ಅವರಿಗೆ ಸೌಲಭ್ಯ ಒದಗಿಸಬೇಕು. ಅದಕ್ಕಿಂತ ಹೆಚ್ಚಿಗೆ ಒದಗಿಸಬಾರದು. ಅದು ಕಾನೂನು ಬಾಹಿರ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q