ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ನನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದೆ.
ಮುಖ, ತಲೆ ಸೇರಿದಂತೆ ವಿವಿಧ ಭಾಗಗಳಿಗೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ.
ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4