ತುಮಕೂರು: ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ನವೆಂಬರ್ 14ರಂದು ಬೆಳಿಗ್ಗೆ 9 ಗಂಟೆಗೆ “ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಎನ್.ಸಿ.ಡಿ(ಅಸಾಂಕ್ರಾಮಿಕ) ಖಾಯಿಲೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಜಿಲ್ಲಾ ಮಟ್ಟದಲ್ಲಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಾಥಾ ಕಾರ್ಯಕ್ರಮವನ್ನು ” Diabetes and well–being ” ಎಂಬ ಘೋಷ ವಾಕ್ಯದೊಂದಿಗೆ ಏರ್ಪಡಿಸಲಾಗಿದ್ದು, ಈ ಜಾಥಾದಲ್ಲಿ ಎನ್.ಸಿ.ಸಿ. ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಜಾಥಾ ಕಾರ್ಯಕ್ರಮವು ಜಿಲ್ಲಾ ಆಸ್ಪತ್ರೆ ಆವರಣದಿಂದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದವರೆಗೆ ಸಾಗಲಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q