ತುಮಕೂರು: ನಗರದ ಚಿಕ್ಕಪೇಟೆ ಮುಖ್ಯರಸ್ತೆಯ” (ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಕಡೆಯಿಂದ) ಪುರಾತನೆ ಶ್ರೀ ಪ್ರಸನ್ನ ಗಂಗಾಧರೇಶ್ವರಸ್ವಾಮಿ ದೇವಾಲಯದಲ್ಲಿ ನ.19 ರಂದು ಲಕ್ಷ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನ.17 ರಂದು ಕಡೇ ಕಾರ್ತಿಕ ಸೋಮವಾರ ಶ್ರೀಸ್ವಾಮಿಗೆ ಏಕವಾರ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ, ಅಲಂಕಾರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.
ನ.19 ರಂದು ಕಾರ್ತಿಕ ಅಮಾವಾಸ್ಯೆ ಪ್ರಯುಕ್ತ ಶ್ರೀ ಗಂಗಾಧರೇಶ್ವರಸ್ವಾಮಿಗೆ ರುದ್ರಾಭಿಷೇಕ ವಿಶೇಷ ಪುಷ್ಪಾಲಂಕಾರ ಮಹಾಮಂಗಳಾರತಿ ಸಂಜೆ ಲಕ್ಷದೀಪೋತ್ಸವ ಏರ್ಪಡಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಬೇಕೆಂದು ದೇವಸ್ಥಾನದ ಅರ್ಚಕ ರವೀಂದ್ರನಾಗ್ ದೀಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


