ಭಾರತೀಯರು ಈಗ ವೀಸಾ ಇಲ್ಲದೆ ಶ್ರೀಲಂಕಾಕ್ಕೆ ಭೇಟಿ ನೀಡಬಹುದು! ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನದಲ್ಲಿ, ಶ್ರೀಲಂಕಾವು ಪೈಲಟ್ ಯೋಜನೆಯಡಿಯಲ್ಲಿ ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ಅನುಮತಿಸುತ್ತದೆ ಎಂದು ದೇಶದ ವಿದೇಶಾಂಗ ವ್ಯವಹಾರಗಳ ಸಚಿವರು ಮಂಗಳವಾರ ಹೇಳಿದ್ದಾರೆ.
ಈ ನಿರ್ಧಾರವನ್ನು ಶ್ರೀಲಂಕಾ ಕ್ಯಾಬಿನೆಟ್ ಅನುಮೋದಿಸಿದೆ ಎಂದು ಸಚಿವ ಅಲಿ ಸಬ್ರಿ ಹೇಳಿದ್ದಾರೆ. ತಕ್ಷಣದಿಂದ ಜಾರಿಗೆ ಬಂದಿರುವ ಪ್ರಾಯೋಗಿಕ ಯೋಜನೆಯು ಮಾರ್ಚ್ 31, 2024 ರವರೆಗೆ ಮುಂದುವರಿಯುತ್ತದೆ ಎಂದು ಸಚಿವರು ಹೇಳಿದರು.
ಶ್ರೀಲಂಕಾದ ಪ್ರವಾಸೋದ್ಯಮ ಸಚಿವಾಲಯದ ಪ್ರಕಾರ, ದೇಶಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವುದು ಈ ಕ್ರಮದ ಉದ್ದೇಶವಾಗಿದೆ. “ಮುಂಬರುವ ವರ್ಷಗಳಲ್ಲಿ ಪ್ರವಾಸಿಗರ ಆಗಮನವನ್ನು ಐದು ಮಿಲಿಯನ್ ಗೆ ಹೆಚ್ಚಿಸುವ ನಿರೀಕ್ಷೆಯಿದೆ” ಎಂದು ಸಚಿವಾಲಯವು ತಿಳಿಸಿದೆ.


