ಬೈಕ್ ಗೆ ಇನೋವಾ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಾಜಿದ್ ಖಾನ್ (39) ಎಂದು ಗುರುತಿಸಲಾಗಿದೆ. 2 ಕಾರು 2 ಬೈಕ್ ಗಳಿಗೆ ಇನೋವಾ ಕಾರು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಮಾಜಿದ್ ಖಾನ್ ಆಟೋ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು.
ಇನ್ನು ರಿಯಾಜ್ ಸೇರಿ ನಾಲ್ವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಮುಸುರೇಶ್ ಎಂಬುವವರ ಹೆಸರಿನಲ್ಲಿರುವ ಕಾರು ಇನೋವಾ ಕಾರನ್ನ ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


