ಸಿದ್ಧರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು ಈ ಮಧ್ಯೆ ಸಿದ್ಧರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.
ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ವರುಣಾದಲ್ಲಿ ಬಿವೈ ವಿಜಯೇಂದ್ರ ಸ್ಪರ್ಧಿಸಬೇಕು ಎಂಬುದು ಜನರ ಬೇಡಿಕೆ. ಈ ಬಗ್ಗೆ ಪಾರ್ಲಿಮೆಂಟರಿ ಬೋರ್ಡ್ ಬಿಎಸ್ ಯಡಿಯೂರಪ್ಪ ಅಂತಿಮ ತೀರ್ಮಾನ ಮಾಡುತ್ತಾರೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ದ ಪೈಪೋಟಿ ಕೊಡುತ್ತೇವೆ ಎಂದು ತಿಳಿಸಿದರು.
ಹಾಗೆಯೇ ಮಾತು ಮುಂದುವರೆಸಿದ ಸಿಎಂ ಬೊಮ್ಮಾಯಿ, ಬರೆದಿಟ್ಟುಕೊಳ್ಳಿ ನೂರಕ್ಕೆ ನೂರು ನಾವೇ ಅಧಿಕಾರಕ್ಕೆ ಬರುತ್ತೇವೆ. ಘಾಟಿ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ. ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಸಮೀಕ್ಷೆ ನಡೆಯುತ್ತಿವೆ. ಇನ್ನೂ ಒಂದುವರೆ ತಿಂಗಳು ಸಮಯವಿದೆ. ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಇಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


