ಮುಂಬೈ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ.
ಮನೆಗೆ ಹೋಗಲು ನರ್ಸಿಂಗ್ ವಿದ್ಯಾರ್ಥಿನಿ ಆಟೋ ಹತ್ತಿದ್ದಳು. ದಾರಿ ಮಧ್ಯೆ ಆಟೋ ಚಾಲಕ ನೀಡಿದ ನೀರನ್ನು ಆಕೆ ಕುಡಿದಿದ್ದಳು. ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಈ ವೇಳೆ ಆಟೋ ಚಾಲಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ.
ಪ್ರಜ್ಞೆ ಬಂದ ಬಳಿಕ ವಿದ್ಯಾರ್ಥಿನಿ ತನ್ನ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಬಳಿಕ ಆಟೋ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ.
ಸದ್ಯ ಆಟೋ ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಿಸಿ ಕ್ಯಾಮರಾದಲ್ಲಿ ಕೃತ್ಯಕ್ಕೆ ಬಳಸಲಾದ ಆಟೋದ ಸುಳಿವು ದೊರಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q