ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎರಡು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊವಿಡ್ 19 ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ.
ತುಮಕೂರು ಜಿಲ್ಲೆಯ ಸಿದ್ಧಗಂಗಾ ನರ್ಸಿಂಗ್ ಕಾಲೇಜು ಮತ್ತು ವರದರಾಜ ಕಾಲೇಜು ವಿದ್ಯಾರ್ಥಿಗಳಿಗೆ ಕೊವಿಡ್ ಪಾಸಿಟಿವ್ ಬಂದಿದೆ ಎಂದು ಹೇಳಲಾಗಿದ್ದು, ಕೇರಳ ಮೂಲದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಕೊವಿಡ್ ಪಾಸಿಟಿವ್ ರಿಪೋರ್ಟ್ ಬಂದಿದೆ ಎನ್ನಲಾಗಿದೆ.
ಸದ್ಯ ಸೋಂಕು ದೃಢಪಟ್ಟ ವಿದ್ಯಾರ್ಥಿಗಳನ್ನು ಐಸೋಲೇಶನ್ ನಲ್ಲಿ ಇಡಲಾಗಿದೆ. ಸೋಂಕು ಕಂಡು ಬಂದ ಕಾಲೇಜುಗಳನ್ನು ಕಂಟೋನ್ಮೆಂಟ್ ವಲಯಗಳನ್ನಾಗಿ ಘೋಷಣೆ ಮಾಡಿ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸೋಂಕು ಕಂಡು ಬಂದ ಕಾಲೇಜು ಬಳಿಗೆ ಸಾರ್ವಜನಿಕ ಪ್ರವೇಶ ನಿಷೇಧಿಸಿ ರೆಡ್ ಅಲಾರ್ಟ್ ಘೋಷಿಸಲಾಗಿದೆ. ಪಾಸಿಟಿವ್ ರಿಪೋರ್ಟ್ ಬಂದಿರುವ ವಿದ್ಯಾರ್ಥಿಗಳ ಆರೋಗ್ಯವನ್ನ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ, ತುಮಕೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700