ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿದ್ದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು ನಿನ್ನೆ ಅಗಲಿದ್ದರು. ಅಂತ್ಯ ಸಂಸ್ಕಾರವನ್ನು ಅವರ ಇಚ್ಛೆಯಂತೆ ಅಗ್ನಿ ಸ್ಪರ್ಷ ಮಾಡುವ ಮೂಲಕ ಜ್ಞಾನಯೋಗಾಶ್ರಮದಲ್ಲಿ ನೆರವೇರಿಸಲಾಯಿತು. ಯಾವುದೇ ಧಾರ್ಮಿಕ ವಿಧಿವಿಧಾನವಿಲ್ಲದೇ ಶ್ರೀಗಳ ಅಂತ್ಯ ಸಂಸ್ಕಾರ ನೇರವೇರಿದೆ. ಈ ಮೂಲಕ ನಡೆದಾಡುವ ದೇವರು ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನರಾದರು.
ನಿನ್ನೆ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯರಾಗಿದ್ದರು. ಇಂದು ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು.
ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀಗಳ ಪಾರ್ಥಿವ ಶರೀರವನ್ನು ಅಪಾರ ಭಕ್ತರರ ನಡುವೆ ಅಂತ್ಯ ಸಂಸ್ಕಾರದ ಸ್ಥಳಕ್ಕೆ ತೆರೆದ ವಾಹನದಲ್ಲಿ ಕರೆದು ಹೋಗಲಾಯಿತು. ಇದಲ್ಲದೇ ಅವರ ಪಾರ್ಥಿವ ಶರೀರವಿದ್ದ ವಾಹನದ ಮೇಲೆ ಹೂವಿನ ಮಳೆಯನ್ನು ಸುರಿಸಿ ಶತಮಾನದ ಸಂತನಿಗೆ ಅಶ್ರುತರ್ಪದ ಮೂಲಕ ಕಳುಹಿಸಿಕೊಟ್ಟರು.
ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಲಕ್ಷ ಲಕ್ಷ ಜನರು ಆಗಮಿಸಿ, ಶ್ರೀಗಳ ಅಂತಿಮ ದರ್ಶನವನ್ನು ಪಡೆದರು. ಇದಲ್ಲದೇ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರು, ಸಚಿವರು ವಿವಿಧ ಮಠಾಧೀಶರು ಪಾಲ್ಗೊಂಡು ಸಿದ್ದೇಶ್ವರ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.
ಶ್ರೀಗಳ ಇಚ್ಛೆಯಂತೆ ಆಶ್ರಮದ ಆವರಣದಲ್ಲಿ ಸಿದ್ದೇಶ್ವರ ಶ್ರೀಗಳ ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಷ ಮಾಡಲಾಯಿತು. ಈ ಮೂಲಕ ಸಿದ್ದೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನರಾದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


