ನವದೆಹಲಿ: ನವದೆಹಲಿಯಲ್ಲಿಂದು ನಡೆದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಜಂಟಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕಾಗಿದೆ ಇದು ಸಾಮಾನ್ಯ ಜನರಲ್ಲಿ ವಿಶ್ವಾಸ ಮೂಡಿಸುತ್ತದೆ. ಇದು ನ್ಯಾಯ ವ್ಯವಸ್ಥೆಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಸುಗಮ ಸಂಪರ್ಕಕ್ಕೆ ಸಹಾಯವಾಗಲಿದೆ ಎಂದು ಅವರುತಿಳಿಸಿದ್ದಾರೆ.
ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯನ್ನು ಆಚರಿಸುತ್ತಿರುವಾಗ ಎಲ್ಲರಿಗೂ ಸುಲಭವಾಗಿ, ನ್ಯಾಯ ದೊರೆಯುವ ವ್ಯವಸ್ಥೆಯನ್ನು ರಚಿಸುವತ್ತ ಗಮನಕೊಂಡಬೇಕು ಎಂದು ಸಂದೇಶ ನೀಡಿದರು. ಭಾರತದಲ್ಲಿ ನ್ಯಾಯಾಂಗ ಸಂವಿಧಾನ ರಕ್ಷಕನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದು, ಶಾಸಕಾಂಗ ನಾಗರಿಕರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ.
ಸುಪ್ರಿಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ಸಂವಿಧಾನ ಮೂರು ಅಂಗಗಳ ನಡುವೆ ಅಧಿಕಾರವನ್ನು ಪ್ರತ್ಯೇಕಗೊಳಿಸಿ ಸ್ಪಷ್ಟತೆ ನೀಡಿದೆ. ಪ್ರತಿಯೊಂದು ಅಂಗವೂ ಕರ್ತವ್ಯ ನಿರ್ವಹಿಸುವಾಗ ಲಕ್ಷ್ಮಣ ರೇಖೆಯನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದರು.ನ್ಯಾಯಾಂಗ ತೀರ್ಪುಗಳ ಹೊರತಾಗಿಯೂ ಸರ್ಕಾರಗಳ ಉದ್ದೇಶಪೂರ್ವಕ ನಿಷ್ಕ್ರಿಯತೆ ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಒಳ್ಳೆಯದಲ್ಲ. ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗಗಳ ನಡುವಿನ ಸಾಮರಸ್ಯ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ ಎಂದು ಅವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy