ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಹೀನಾಯವಾಗಿ ಸೋತ ಡಾ.ಕೆ. ಸುಧಾಕರ್ ಅವರಿಗೆ ಇದೀಗ ಅದೇ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುತ್ತಿದೆ. ಆದರೀಗ, ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಚಿಕ್ಕಬಳ್ಳಾಪುರದ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸುಧಾಕರ್ ವಿರುದ್ಧ ರೊಚ್ಚಿಗೆದ್ದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಆದರೆ ಈ ಬೆನ್ನಲ್ಲೇ ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು ಸುಧಾಕರ್ ವಿರುದ್ಧ ರೊಚ್ಚಿಗೆದ್ದು, ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವೈರಲ್ ಆಗಿರುವ ಕರಿಮಣಿ ಮಾಲಿಕ ಹಾಡನ್ನು ತಿರುಚಿ ‘ಓ ನಲ್ಲಾ ನೀ ನಲ್ಲಾ, ಚಿಕ್ಕಬಳ್ಳಾಪುರಕ್ಕೆ ನೀ ಲಾಯಕ್ಕಲಾ’ ಎಂದು ಘೋಷಣೆ ಕೂಗಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296